ಸಿರವಾರ: ತಾಲೂಕಿನ ನವಲಕಲ್ ಗ್ರಾಮದ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಆವರಣದಲ್ಲಿ ಗುರುವಾರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ನವಲಕಲ್ ಬೃಹನ್ಮಠದ ಪೀಠಾಧಿಪತಿ ಪೂಜ್ಯಶ್ರೀ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶ್ರೀಗಳು, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು, ವೈಯಕ್ತಿಕ ದ್ವೇಷಕ್ಕೆ ತಿರುಗಬಾರದು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮನಾಗಿ ಸ್ವೀಕರಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಜಿ. ಹಂಪಯ್ಯ ನಾಯಕ ಮಾತನಾಡಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬ್ರಿಜೇಶ್ ಪಾಟೀಲ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹನುಮಂತ ಚನ್ನೂರು, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಆರಿಫ್ ಮಿಯಾ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ ಚೌದರಿ, ಸದಸ್ಯರಾದ ಸೂರಿ ದುರ್ಗಣ್ಣ ನಾಯಕ್, ಮಹಮ್ಮದ್ ಮೌಲಾಸಾಬ್ ವರ್ಚಸ್, ಸಿರವಾರ ಪಟ್ಟಣದ ಬಾಲಕರ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹಮ್ಮದ್ ರಫಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.








