ರಾಯಚೂರು: ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು. ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಕಚೇರಿಯಲ್ಲಿ ರಾಯಚೂರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರನ್ನು ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಸಚಿವರು, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಬಳಿಕ ರಾಯಚೂರು ಜಿಲ್ಲೆ ಹಾಗೂ ಗ್ರಾಮೀಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯ, ಸಾರ್ವಜನಿಕ ಸಮಸ್ಯೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Previous articleರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ಸೇರಿ ನಗರವನ್ನು ಲೂಟಿ ಮಾಡಿದ್ದಾರೆ: ರಾಮನಗೌಡ ಕಿಡಿ
Next articleಸಿರವಾರ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಕೇಂದ್ರ ಜಂಟಿ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್ ಭೇಟಿ