ರಾಯಚೂರು: ರಾಯಚೂರು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ನವೆಂಬರ್ 1ರಂದು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜಿಸಲಾಗಿದೆ.
ನಗರದ ಮಾಣಿಕ ಪ್ರಭು ದೇವಸ್ಥಾನ ರಸ್ತೆಯಲ್ಲಿರುವ ಎಸ್ಆರ್ಪಿಎಸ್ ಕಾಲೇಜಿನ ಪಕ್ಕದ ಆರ್ಡಿಟಿಟಿಎ ಹಾಲ್ನಲ್ಲಿ ಪಂದ್ಯಾವಳಿ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಹಾಗೂ ಟೇಬಲ್ ಟೆನ್ನಿಸ್ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿದೆ.
ಪಂದ್ಯಾವಳಿಯಲ್ಲಿ ಪುರುಷರ ಸಿಂಗಲ್ಸ್, ಮಹಿಳೆಯರ ಸಿಂಗಲ್ಸ್, ಪುರುಷರ ಡಬಲ್ಸ್ ಹಾಗೂ ಮಹಿಳೆಯರ ಡಬಲ್ಸ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸಿಂಗಲ್ಸ್ ವಿಭಾಗಕ್ಕೆ ₹150 ಹಾಗೂ ಡಬಲ್ಸ್ ವಿಭಾಗಕ್ಕೆ ₹250 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.
ಪಂದ್ಯಾವಳಿಯಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 31ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಲಕ್ಷ್ಮೀ ನಾರಾಯಣ (ಮೊ. 9845861363) ಅಥವಾ ಮಂಚಲ ವೀರಣ್ಣ (ಮೊ. 9448837766) ಅವರನ್ನು ಸಂಪರ್ಕಿಸಬಹುದು.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸುವುದರೊಂದಿಗೆ ಟೇಬಲ್ ಟೆನ್ನಿಸ್ ಕ್ರೀಡೆಯ ಬೆಳವಣಿಗೆಗೆ ಸಹಕರಿಸಬೇಕು ಎಂದು ರಾಯಚೂರು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.








