ಮಾನ್ವಿ: ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಶಾಸಕ ಹಂಪಯ್ಯ ನಾಯಕ ಅವರು ಮಹರ್ಷಿ ವಾಲ್ಮೀಕಿಯವರ ಮೂರ್ತಿಗೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹಂಪಯ್ಯ ನಾಯಕ, ಆದಿಕವಿ ಮಹರ್ಷಿ ವಾಲ್ಮೀಕಿಯವರು ಆರಂಭದಲ್ಲಿ ಬೇಡರಾಗಿದ್ದರೂ ಕಠಿಣ ತಪಸ್ಸು ಮತ್ತು ಛಲದ ಮೂಲಕ ಮಹರ್ಷಿಯಾಗಿ ಬೆಳೆದರು. ರಾಮಾಯಣ ಮಹಾಕಾವ್ಯವನ್ನು ರಚಿಸುವ ಮೂಲಕ ಜಗತ್ತಿಗೆ ಸತ್ಯ, ಧರ್ಮ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಸಾರಿದರು. ಜನರಲ್ಲಿನ ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಸುಜ್ಞಾನದ ಬೆಳಕನ್ನು ತೋರಿಸಿದರು ಎಂದು ಹೇಳಿದರು.

ಜಯಂತಿ ಅಂಗವಾಗಿ ಮಹರ್ಷಿ ವಾಲ್ಮೀಕಿ ಸಮುದಾಯದ ಯುವಕರು ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಗಂಗಾಧರ ನಾಯಕ ಮತ್ತು ರಾಜಾ ವೆಂಕಟಪ್ಪ ನಾಯಕ, ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ. ಅಮರೇಶಪ್ಪ, ವಕೀಲರು, ರಾಜ ಸುಭಾಷ್ ಚಂದ್ರ ನಾಯಕ, ಲಕ್ಷ್ಮೀದೇವಿ ನಾಯಕ, ಹೆಚ್. ಮೌನೇಶಗೌಡ, ಜಿ. ನಾಗರಾಜ್, ಹನುಮೇಶ್ ನಾಯಕ ಸದಾಪುರ, ಸತ್ತಾರ್ ಬಂಗ್ಲೆವಾಲೆ, ಹನುಮಂತರಾಯ ನಾಯಕ, ರಾಮಣ್ಣ ನಾಯಕ ಸೇರಿದಂತೆ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


Previous articleಮಾನ್ವಿಯಲ್ಲಿ ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ ಆಚರಣೆ
Next articleಮಾನ್ವಿ ಪೆಟ್ರೋಲ್ ಬಂಕ್‌ನಲ್ಲಿ ಬೈಕ್‌ಗೆ ಬೆಂಕಿ, ಪಲ್ಸರ್ 220 ಭಸ್ಮ