ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ನೂತನ ಎಕ್ಸಪ್ರೆಸ್ ಬಸ್ ನಿಲ್ದಾಣ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು ಪರಿಶೀಲಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲೇಕ್ಟಿçಕಲ್ ವಿಭಾಗದ ಅಭಿಯಂತರ ಬಸವರಾಜ ರವರಿಗೆ ನೂತನ ಎಕ್ಸಪ್ರೆಸ್ ಬಸ್ ನಿಲ್ದಾಣ ಕಾಮಗಾರಿ ಮಂದಗಾತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದರಿಂದ ಗುತ್ತಿಗೆದಾರರಿಗೆ ಕಾಮಗಾರಿಯ ಮುಂದಿನ ಹಂತದ ನೀಲನಕ್ಷೆಯನ್ನು ಕೂಡಲೇ ಸಲ್ಲಿಸಲು ಸೂಚಿಸಿದರು.
ಶಾಸಕ ಜಿ.ಹಂಪಯ್ಯನಾಯಕ್, ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕರಾದ ಎಂ.ನಾಗರಾಜ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲ್ ಗಾಫುರ್ ಸಾಬ್, ಪಂಚ ಗ್ಯಾರಂಟಿ ಅಧ್ಯಕ್ಷ ಬಿ.ಕೆ ಅಮರೇಶಪ್ಪ ವಕೀಲರು ಸೇರಿದಂತೆ ಇನ್ನಿತರರು ಇದ್ದರು.








