ಮಾನ್ವಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ನೇಗಿಲುಯೋಗಿ ಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿದ್ದು. ಅದಕ್ಕಾಗಿ ರೈತರ ಹಾಗೂ ಸೇವಾದಾರರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು. ಈ ಯೋಜನೆಯಡಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿರುವುದರಿಂದ ತಾಲೂಕಿನ ಟ್ರ‍್ಯಾಕ್ಟರ್, ಪವರ್ ಟಿಲ್ಲರ್, ಸ್ವಯಂಚಾಲಿತ ಭತ್ತ ನಾಟಿ ಯಂತ್ರ, ರೀಪರ್. ಕಂಬೈನ್ ಹಾರ್ವೆಸ್ಟರ್ ಹಾಗೂ ಇತರೆ ಕೃಷಿ ಯಂತ್ರೋಪಕರಣಗಳನ್ನು ಹೋಂದಿರುವ ಆಸಕ್ತ ರೈತರು ಮತ್ತು ಸೇವಾದಾರರು ತಮ್ಮ ಟ್ರ‍್ಯಾಕ್ಟರ್ ಆರ್.ಸಿ.ಪುಸ್ತಕ, ಟ್ರ‍್ಯಾಕ್ಟರ್ ಚಾಸಿ ಸಂಖ್ಯೆ , ರೈತನ ಗುರುತಿನ ಚೀಟಿಗಾಗಿ ಆಧಾರ್ ಕಾರ್ಡ್ ಅಥವಾ ಇತರೆ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ರೈತರು ಹಾಗೂ ಕೃಷಿ ಯಂತ್ರೋಪಕರಣಗಳ ಮಾಲೀಕರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಸಲ್ಲಿಸುವ ಮೂಲಕ ಸೇವಾದಾರರಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಗುರುನಾಥ ಭೂಸನೂರ್ ಪ್ರಕಟಣೆಯ ಮೂಲಕ ಕೋರಿದ್ದಾರೆ.








