ಮಂತ್ರಾಲಯ: ಉತ್ತಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವನ್ನು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ವಿಡಿಯೋ ನೋಡಿ.. ನಮ್ಮ ಯೂಟ್ಯೂಬ್ ಚಾನೆಲ್ ಗೆ ಅಬ್ ಸ್ಕ್ರೈಬ್ ಆಗಿ..
ಮಹೋತ್ಸವದ ಅಂಗವಾಗಿ ಶ್ರೀಮಠದ ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸಂಜೆ ವಿಶೇಷ ಪೂಜೆಯನ್ನು ನೆರವೇರಿಸಿದರು. ಬಳಿಕ ತುಳಸಿ ಸನ್ನಿಧಾನದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀ ರಾಯರ ಮೂಲ ಪಾದುಕಾ ಪೂಜೆ ಹಾಗೂ ಶ್ರೀ ಪ್ರಹ್ಲಾದರಾಜರ ಉತ್ಸವ ಮೂರ್ತಿಗೆ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಪಾದಂಗಳವರು ನೆರವೇರಿಸಿದರು.
ಪವಿತ್ರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ, ತುಳಸಿ–ದಾಮೋದರ ವಿವಾಹ ಮಹೋತ್ಸವದ ದರ್ಶನ ಪಡೆದು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದರು.








