ಸಿರವಾರ: ಪಟ್ಟಣದ ಶ್ರೀ ಅಮರೇಗೌಡ ಬಯ್ಯಾಪುರ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ 2026-27ನೇ ಸಾಲಿನ ಪ್ರಥಮ ಪಿಯುಸಿ ಮತ್ತು ಐಟಿಐ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹನುಮಂತ ಚನ್ನೂರು, “ವಿದ್ಯಾರ್ಥಿ ಜೀವನ ಮರಳಿ ಬಾರದು. ಸಮಯ ವ್ಯರ್ಥ ಮಾಡದೆ ಉಪನ್ಯಾಸಕರ ಪಾಠವನ್ನು ಅರ್ಥಮಾಡಿಕೊಂಡು, ಕಾಲೇಜಿನಲ್ಲಿರುವ ಎಲ್ಲ ಶೈಕ್ಷಣಿಕ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಹುದ್ದೆಗೇರಬೇಕು. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ವಿರುಪಣ್ಣ ಎನ್. ಗಣೇಕಲ್ ಅವರು, “ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ. ಪುಸ್ತಕ ಓದುವ ಹವ್ಯಾಸ ವ್ಯಕ್ತಿತ್ವವನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಪಾಲಕರು ಮತ್ತು ಉಪನ್ಯಾಸಕರ ನಂಬಿಕೆಯನ್ನು ಹುಸಿಗೊಳಿಸಬೇಡಿ” ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಅಮರೇಶ ಗೌಡ ನಂದರಡ್ಡಿ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ವೈಫಲ್ಯದಿಂದ ಎದೆಗುಂದದೆ ಆತ್ಮವಿಶ್ವಾಸದಿಂದ ಪ್ರಯತ್ನಿಸಿದರೆ ಯಶಸ್ಸು ಖಚಿತ ಎಂದು ಸಲಹೆ ನೀಡಿದರು.
ಇದೇ ವೇಳೆ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭೂಮಿಕಾ (ತಂದೆ ಶರಣಪ್ಪ ಕೋಟೆ) ಹಾಗೂ ವಾಣಿಜ್ಯ ವಿಭಾಗದ ಟಾಪರ್ ರೇಹನ್ ಬೇಗಂ (ತಂದೆ ಇಬ್ರಾಹಿಂ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸೂಗೂರೇಶ ಹಿರೇಮಠ,ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಜಾವೀದ್ ಬಡೇಗರ್, ಜ್ಞಾನಗಂಗಾ ಶಾಲೆಯ ಅಧ್ಯಕ್ಷ ವೆಂಕಟರೆಡ್ಡಿ ಬಲ್ಕಲ್, ಶಾಂತಿನಿಕೇತನ ಶಾಲೆಯ ಮು.ಗು. ಬಾಬು ಸಿ. ಹಟ್ಟಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹನುಮೇಶ, ಪತ್ರಕರ್ತ ಎಸ್. ವಿಜಯಕುಮಾರ್, ಉಪನ್ಯಾಸಕರಾದ ಫಕ್ರುದ್ದೀನ್ ಮರಡಿ, ಪಿ. ಪ್ರವೀಣ್ ಕುಮಾರ್ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…