ರಾಯಚೂರು: ಬಡ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಅಕ್ಷರ ಜ್ಞಾನ ಕಲಿಸುವ ಉದ್ದೇಶದಿಂದ ನಗರದ ಮಂಗಳವಾರಪೇಟೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ‘ಅಂಬೇಡ್ಕರ್ ಅಕ್ಷರದ ಅರಿವು ಉಚಿತ ಪಾಠಶಾಲೆ’ ನಡೆಸಲಾಗುತ್ತಿದೆ.
ಮನೆ ಮನೆಗಳಲ್ಲಿ ‘ಅಂಬೇಡ್ಕರ್ ವಿಚಾರ’ ಕಾರ್ಯಕ್ರಮ ಹಮ್ಮಿಕೊಂಡ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ಸ್ಥಿತಿಗತಿ ಪರಿಶೀಲಿಸಿದಾಗ, 1ರಿಂದ 7ನೇ ತರಗತಿಯ ಹಲವು ಮಕ್ಕಳು ಅಕ್ಷರಗಳನ್ನು ಗುರುತಿಸುವುದಕ್ಕೂ ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿತು. ಈ ಕುರಿತು ಪಾಲಕರೊಂದಿಗೆ ಚರ್ಚಿಸಿದ ಬಳಿಕ ಉಚಿತ ಪಾಠಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಪ್ರಗತಿಪರ ಚಿಂತಕಿ ಪಲ್ಲವಿ ಕೋಸಗಿ ತಿಳಿಸಿದ್ದಾರೆ.
ಪಾಠಶಾಲೆಯಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಗಣಿತದ ಮೂಲಭೂತ ಜ್ಞಾನವನ್ನು ಕಲಿಸಲಾಗುತ್ತಿದ್ದು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿವಿಧ ರೀತಿಯ ಪ್ರಯೋಗಗಳ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಪಲ್ಲವಿ ಕೋಸಗಿ ಹಾಗೂ ಈರಣ್ಣ ಕೋಸಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಅಮರೇಶ ನಾಗಲಾಪೂರ್ ಅವರು ಬೋರ್ಡ್ ಒದಗಿಸಿದ್ದಾರೆ. ಪ್ರತಿ ತಿಂಗಳು ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತಿದೆ.
ಶಿಕ್ಷಣದ ಜೊತೆಗೆ ತ್ರಿಸರಣ, ಪಂಚಶೀಲ, ಬುದ್ಧ ವಂದನೆ, ನಾಟಕ ಹಾಗೂ ನೃತ್ಯ ತರಬೇತಿಯನ್ನೂ ನೀಡಲಾಗುತ್ತಿದೆ. ಮಕ್ಕಳನ್ನು ಉದ್ಯಾನವನಗಳಿಗೆ ಕರೆದುಕೊಂಡು ಹೋಗಿ ನಿಸರ್ಗದೊಂದಿಗೆ ಆಟದ ಮೂಲಕ ಪಾಠ ಕಲಿಸುವ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಇದರ ಪರಿಣಾಮವಾಗಿ ಹಲವು ಮಕ್ಕಳು ಇದೀಗ ಕನ್ನಡ ಮತ್ತು ಇಂಗ್ಲಿಷ್ ಓದು-ಬರಹ ಕಲಿಯುತ್ತಿದ್ದಾರೆ.
ಪಾಠಶಾಲೆಯ ಮೂಲಕ 5ನೇ ತರಗತಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಬರೆಯುವ ಕುರಿತು ತರಬೇತಿ ನೀಡಲಾಗಿದ್ದು, ಕೆಲ ವಿದ್ಯಾರ್ಥಿಗಳು ವಸತಿ ಶಾಲೆಗಳಿಗೆ ಆಯ್ಕೆಯಾಗಿ ಪ್ರಸ್ತುತ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದೇ ರೀತಿಯಾಗಿ ರಾಯಚೂರಿನ ಸರ್ತಿಗೇರಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿಯೂ ಬಡ ಮಕ್ಕಳಿಗಾಗಿ ಉಚಿತ ಪಾಠಶಾಲೆ ನಡೆಸಲಾಗುತ್ತಿದ್ದು, 20ರಿಂದ 30 ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ಪ್ರತಿ ತಿಂಗಳು ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತಿದೆ.
‘ಮನೆ ಮನೆಗಳಲ್ಲಿ ಅಂಬೇಡ್ಕರ್ ವಿಚಾರ’ ಕಾರ್ಯಕ್ರಮದ ಮೂಲಕ ಶಿಕ್ಷಣದ ಮಹತ್ವ, ಸಂವಿಧಾನದ ಆಶಯಗಳು, ಸರ್ಕಾರಿ ಯೋಜನೆಗಳ ಸದುಪಯೋಗ, ಆರೋಗ್ಯ ಹಾಗೂ ಜೀವ ವಿಮೆ, ಉಳಿತಾಯ, ಮಹಿಳೆಯರು ಮತ್ತು ಕಾರ್ಮಿಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಐದು ವರ್ಷಕ್ಕೂ ಹೆಚ್ಚು ಕಾಲದಿಂದ ಈ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇನೆ ಎಂದು ಪಲ್ಲವಿ ಕೋಸಗಿ ತಿಳಿಸಿದ್ದಾರೆ.
ಬಡ ಕುಟುಂಬಗಳ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು
“ಮನೆ ಮನೆಗಳಲ್ಲಿ ಅಂಬೇಡ್ಕರ್ ವಿಚಾರ ಕಾರ್ಯಕ್ರಮ ನಡೆಸುವ ಸಂದರ್ಭದಲ್ಲಿ ನಮ್ಮ ಮಕ್ಕಳ ಶಿಕ್ಷಣದ ಸ್ಥಿತಿ ಗಮನಕ್ಕೆ ಬಂತು. ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದರೂ ಹಲವು ಮಕ್ಕಳು ಅಕ್ಷರಗಳನ್ನು ಗುರುತಿಸುವುದಕ್ಕೂ ತೊಂದರೆ ಅನುಭವಿಸುತ್ತಿರುವುದು ಕಂಡುಬಂದಿತು. ಇಂತಹ ಮಕ್ಕಳಿಗೆ ಶಿಕ್ಷಣದ ಬೆಳಕು ನೀಡಬೇಕು ಎಂಬ ಉದ್ದೇಶದಿಂದ ‘ಅಂಬೇಡ್ಕರ್ ಅಕ್ಷರದ ಅರಿವು ಉಚಿತ ಪಾಠಶಾಲೆ’ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಡ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತಂದು ಪ್ರತಿಭಾವಂತ ವಿದ್ಯಾರ್ಥಿಗಳನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ.”
–ಪಲ್ಲವಿ ಕೋಸಗಿ, ಪ್ರಗತಿಪರ ಚಿಂತಕಿ, ರಾಯಚೂರು
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…