ಸಿರವಾರ: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯ (ಕೆಎಎಸ್‌ಎಸ್) ಪೂರ್ಣ ಪ್ರಯೋಜನ ಪಡೆಯಲು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮತ್ತು ನೌಕರರು ತಕ್ಷಣವೇ ನೋಂದಣಿ ಮಾಡಿಕೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಆರಿಫ್ ಮಿಯಾ ಮನವಿ ಮಾಡಿದ್ದಾರೆ.
ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ (Cashless) ವೈದ್ಯಕೀಯ ಚಿಕಿತ್ಸೆ ಒದಗಿಸುವ ಸದುದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸರ್ಕಾರದ ಎಲ್ಲ ಇಲಾಖೆಯ ನೌಕರರು HRMS-1 ತಂತ್ರಾಂಶದ ಮೂಲಕ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
ನೌಕರರ ಸೇವಾ ಹಿತದೃಷ್ಟಿಯಿಂದ ತಮ್ಮ ಹೆಸರು, ಆಧಾರ್ ಕಾರ್ಡ್ ವಿವರ ಹಾಗೂ ಮೊಬೈಲ್ ಸಂಖ್ಯೆಯಲ್ಲಿ ಏನಾದರೂ ತಿದ್ದುಪಡಿಗಳಿದ್ದರೆ ಸರಿಪಡಿಸಿಕೊಂಡು, ಸಂಬಂಧಪಟ್ಟ ಡಿಡಿಒ (DDO) ಗಳಿಗೆ ಅರ್ಹ ಕುಟುಂಬದ ಸದಸ್ಯರ ಸಮಗ್ರ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…