ರಾಯಚೂರು: ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ಉದ್ದೇಶದಿಂದ ಕೂಡ್ಲೂರು ಗ್ರಾಮದಲ್ಲಿ ಒಟ್ಟು ₹1.72 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕೂಡ್ಲೂರು ಮುಖ್ಯ ರಸ್ತೆಯಿಂದ ಶಾಖವಾದಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅಂದಾಜು ₹1.10 ಕೋಟಿ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ಅಂದಾಜು ₹62 ಲಕ್ಷ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ಮಾಡಲಾಯಿತು.
ರಸ್ತೆ ಡಾಂಬರೀಕರಣದಿಂದ ಸುತ್ತಮುತ್ತಲಿನ ಗ್ರಾಮಗಳ ನಡುವಿನ ಸಂಪರ್ಕ ಸುಗಮಗೊಳ್ಳುವುದರ ಜೊತೆಗೆ ಸಾರ್ವಜನಿಕರ ಸಂಚಾರ, ರೈತರ ಕೃಷಿ ಚಟುವಟಿಕೆ ಹಾಗೂ ವಿದ್ಯಾರ್ಥಿಗಳ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗಲಿದೆ. ವಾಲ್ಮೀಕಿ ಭವನವು ಸಮುದಾಯದ ಸಭೆ, ಸಮಾರಂಭ ಹಾಗೂ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲಕರ ಕೇಂದ್ರವಾಗಲಿದೆ.
ಇದೇ ಸಂದರ್ಭದಲ್ಲಿ ಕೂಡ್ಲೂರು ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಬಸನಗೌಡ ದದ್ದಲ್ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಂತ್ರಾಲಯ: ಉತ್ತಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವನ್ನು ಭಕ್ತಿಭಾವ ಮತ್ತು…
ಸಿರವಾರ: "ನಮ್ಮ ಮಕ್ಕಳು ಓದಿನಿಂದ ದೂರವಾದರೆ, ಸಮಾಜ ಮುಂದೆ ಹೋಗಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿಗೆ ಶಿಕ್ಷಣ ಕೊಡಿಸುವುದೇ…
ಮಾನ್ವಿ: ಡಿಸ್ಟ್ರಿಬ್ಯೂಟರ್ 82ರ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ಸುಮಾರು 3 ಸಾವಿರ ಎಕರೆ ಪ್ರದೇಶದಲ್ಲಿ…
ಶಹಾಪುರ: ರೈತರ ಬೆಳೆಗಳು ಒಣಗುತ್ತಿದ್ದರೂ ಶಾಸಕರಿಗೆ ಕಾಳಜಿಯಿಲ್ಲ. ಏಳು ಶಾಸಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕಾಲುವೆಗಳಿಗೆ ನೀರು ಬಿಡುಗಡೆ…
ಮಾನ್ವಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ನೇಗಿಲುಯೋಗಿ ಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ಸುಲಭವಾಗಿ ಮತ್ತು…
ಮಾನ್ವಿ: ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಅನೇಕ ಬಾರಿ ಹೇಳಿದರು ಕೂಡ ಕಾಲುವೆಯಲ್ಲಿ ಸರಿಯಾಗಿ ಗೇಜ್ ನಿರ್ವಾಹಣೆ ಮಾಡದೆ ಇರುವುದರಿಂದ ಮಾನ್ವಿ…