ರಾಯಚೂರು

ಶ್ರಾವಣದ ಕೊನೆಯ ಸೋಮವಾರ: ದೇವಸುಗೂರಿನ ಶ್ರೀ ಸುಗೂರೇಶ್ವರ ದೇವಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ಭೇಟಿ

ರಾಯಚೂರು: ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ದೇವಸುಗೂರು ಗ್ರಾಮದ ಶ್ರೀ ಸುಗೂರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಸುಗೂರೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಬಸನಗೌಡ ದದ್ದಲ್ ಅವರು ಪರಿಶೀಲಿಸಿದರು. ದೇವಸ್ಥಾನದ ಭವನ ನಿರ್ಮಾಣ, ದೇವಸ್ಥಾನದ ಎದುರು ಬೃಹತ್ ಪ್ರತಿಮೆ ನಿರ್ಮಾಣ, ಶೆಡ್ ನವೀಕರಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು.
ಒಟ್ಟು ಸುಮಾರು ₹4 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಕಾಮಗಾರಿಗಳಿಂದ ದೇವಸ್ಥಾನದ ಸೌಂದರ್ಯೀಕರಣದ ಜತೆಗೆ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಅಲ್ಲದೆ, ದೇವಸುಗೂರು ಗ್ರಾಮದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ತಿಳಿಸಿದರು.
ನಂತರ ಗ್ರಾಮದ ಭಕ್ತರು ಹಾಗೂ ಮುಖಂಡರೊಂದಿಗೆ ಶ್ರೀ ಸುಗೂರೇಶ್ವರ ಸ್ವಾಮಿಯ ಪಲ್ಲಕ್ಕಿ ಸೇವೆಯಲ್ಲಿ ಶಾಸಕ ಬಸನಗೌಡ ದದ್ದಲ್ ಭಾಗವಹಿಸಿದರು. ದೇವಸ್ಥಾನದಲ್ಲಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡರು.
ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಶ್ರೀ ಸುಗೂರೇಶ್ವರ ಸ್ವಾಮಿಯ ದರ್ಶನ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರೊಂದಿಗೆ ಭಾಗವಹಿಸಿರುವುದು ಸಂತೋಷ ಹಾಗೂ ಪುಣ್ಯದ ಅನುಭವ ನೀಡಿದೆ ಎಂದು ಅವರು ಹೇಳಿದರು.

projectededore

Recent Posts

‘ಪ್ರೇರಣಾ’ – ವಿ. ಎಸ್. ಕಾಂತನವರ ಹಿಂದಿ ಕಾವ್ಯ ಸುಮಗುಚ್ಛ

ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…

2 weeks ago

ಶಾಸಕ ಬಸನಗೌಡ ದದ್ದಲ್‌ರಿಂದ ವಿಶ್ವವಿದ್ಯಾಲಯದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…

3 weeks ago

ಮಟಮಾರಿಯಲ್ಲಿ ₹3 ಕೋಟಿ ರಸ್ತೆ ಕಾಮಗಾರಿಗೆ ಭೂಮಿಪೂಜೆ; ಕುರ್ಡಿಯಲ್ಲಿ ₹25 ಲಕ್ಷದ ಸಮುದಾಯ ಭವನ ಉದ್ಘಾಟನೆ

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…

3 weeks ago

ಸತೀಶ್ ಜಾರಕಿಹೊಳಿ ಮೇಲಿನ ED ದಾಳಿ ಖಂಡಿಸಿ ಸಿರವಾರದಲ್ಲಿ ಪಂಜಿನ ಮೆರವಣಿಗೆ

ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…

3 weeks ago

ರಾಯಚೂರಿನಲ್ಲಿ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…

3 weeks ago

ವಾರ್ಡ್ ನಂ.22ರ ಮನೆ-ಮನೆಗೆ ಭೇಟಿ: ನಿವಾಸಿಗಳ ಸಮಸ್ಯೆ ಆಲಿಸಿದ ರಾಮನಗೌಡ ಏಗನೂರು

ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…

3 weeks ago