ರಾಯಚೂರು: ತಾಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ಭವಿಷ್ಯ ಭಾರತ್ ಸಂಸ್ಥೆ ಹಾಗೂ VST ಸಂಜೀವನಿ ವತಿಯಿಂದ ನ.3ರಂದು VST ಫೌಂಡೇಶನ್ ಡೇ-2026 ಕಾರ್ಯಕ್ರಮ ಆಯೋಜಿಸಲಾಯಿತು.
ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಭವಿಷ್ಯ ಭಾರತ್ ಸಂಸ್ಥೆಯ ರಾಯಚೂರು ಯೋಜನಾ ಸಂಯೋಜಕ ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಗುರಿ, ಉದ್ದೇಶಗಳು, ವಿವಿಧ ಚಟುವಟಿಕೆಗಳು ಹಾಗೂ ಸಾರ್ವಜನಿಕರಿಗೆ ಒದಗಿಸುತ್ತಿರುವ ಆರೋಗ್ಯ ಸೇವೆಗಳ ಕುರಿತು ಮಾಹಿತಿ ನೀಡಿದರು.
VST ಸಂಜೀವನಿಯ ವೈದ್ಯಾಧಿಕಾರಿ ಡಾ.ವನಿತಾ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಭವಿಷ್ಯ ಭಾರತ್ ಸಂಸ್ಥೆ ಮತ್ತು VST ಸಂಜೀವನಿ ಸಹಯೋಗದಲ್ಲಿ ಗ್ರಾಮೀಣ ಜನರಿಗೆ ನಿರಂತರ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಹಾಗೂ ಔಷಧ ವಿತರಣೆ ಮೂಲಕ ಜನರು ತಮ್ಮ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಲು ಅನುಕೂಲವಾಗಿದೆ. ಗ್ರಾಮಸ್ಥರು ಈ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಗ್ರಾಮದ ಮುಖಂಡ ವೇಣುಗೋಪಾಲ್ ಮಾತನಾಡಿ, ಗ್ರಾಮೀಣ ಜನರಿಗೆ ಸಂಸ್ಥೆಗಳು ಒದಗಿಸುತ್ತಿರುವ ಆರೋಗ್ಯ ಸೇವೆಗಳು ಅತ್ಯಂತ ಉಪಯುಕ್ತವಾಗಿವೆ. ಆರೋಗ್ಯ ಸೇವೆಗಳ ಜತೆಗೆ ಸ್ವಚ್ಛ ಭಾರತ್ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಆರೋಗ್ಯ ಶಿಕ್ಷಣ ಹಾಗೂ ಸಾರ್ವಜನಿಕರಲ್ಲಿ ನೈರ್ಮಲ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ VST ಕಂಪನಿಯ ಏರಿಯಾ ರೀಜನಲ್ ಮ್ಯಾನೇಜರ್ ಶಿವಾರೆಡ್ಡಿ ಮಾತನಾಡಿ, ಗ್ರಾಮೀಣ ಜನರ ಆರೋಗ್ಯ ಕಾಳಜಿಯೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದ ಅಭಿವೃದ್ಧಿಗೆ ಭವಿಷ್ಯ ಭಾರತ್ ಸಂಸ್ಥೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇಂತಹ ಜನಪರ ಸೇವೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಂಸ್ಥೆಗೆ VST ಕಂಪನಿಯ ವತಿಯಿಂದ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ರಂಗಸ್ವಾಮಿ, ವಿನಯ್ ರೆಡ್ಡಿ, ತಿಮ್ಮಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ವೀರೇಶ್, ಸದಸ್ಯ ಶ್ರೀನಿವಾಸ, ಭವಿಷ್ಯ ಭಾರತ್ ಸಂಸ್ಥೆಯ ಸಿಬ್ಬಂದಿಗಳಾದ ಗೀತಾ, ಎಂ.ಡಿ.ರೆಹಾನುಲ್ಲಾ, ಉರುಕುಂದ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮಾನ್ವಿ : ತಾಲೂಕಿನ ರಬ್ಬಣಕಲ್ ಗ್ರಾಮದ ಬಳಿಯಲ್ಲಿನ ಪುರಸಭೆಯ ಕುಡಿಯುವ ನೀರಿನ ಕೆರೆಗೆ ವಿಧಾನ ಪರಿಷತ್ ಸದಸ್ಯ ಎನ್. ಎಸ್…
ಮಾನ್ವಿ: ಮಾನ್ವಿ ತಾಲೂಕು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ವತಿಯಿಂದ ರಾಯಚೂರಿನಲ್ಲಿ ಇತ್ತಿಚಿಗೆ ದುಷ್ಕರ್ಮಿಯಿಂದ ಕೊಲೆಗೆ ಒಳಗಾದ ಆರ್ಯವೈಶ್ಯ ಸಮುದಾಯದ…
ರಾಯಚೂರು: ಕೃಷ್ಣಾ ಮತ್ತು ತುಂಗಭದ್ರಾ ನದಿಗಳು ಜಿಲ್ಲೆಯ ಮೂಲಕವೇ ಹರಿಯುತ್ತಿದ್ದರೂ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ದೊರೆಯದೆ ಸಂಕಷ್ಟ ಎದುರಿಸುವಂತಾಗಿದೆ.…
ಸಿರವಾರ: ಪಟ್ಟಣದಲ್ಲಿ ಟ್ಯಾಕ್ಸಿ ಕಾರುಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಒತ್ತಾಯಿಸಿ ಸಿರವಾರದ ಟ್ಯಾಕ್ಸಿ ಚಾಲಕರ ಒಕ್ಕೂಟದ ವತಿಯಿಂದ ತಹಶೀಲ್ದಾರರಿಗೆ ಮನವಿ…
ಸಿರವಾರ: "ಆಪತ್ತಿನಲ್ಲಿರುವ ಮತ್ತೊಬ್ಬ ವ್ಯಕ್ತಿಯ ಪ್ರಾಣ ಉಳಿಸುವ ರಕ್ತದಾನವು ಜಗತ್ತಿನ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ಕೊಡುಗೆಯಾಗಿದೆ. ಇಂದಿನ ದಿನಗಳಲ್ಲಿ…
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…