ರಾಯಚೂರು

ಮಾಜಿ ಸಂಸದ ಬಿ.ವಿ.ನಾಯಕ ಅವರ 59ನೇ ಜನ್ಮದಿನ: ಉಚಿತ ಆರೋಗ್ಯ, ಬೃಹತ್ ರಕ್ತದಾನ ಶಿಬಿರ ಆಯೋಜನೆ

ಮಾನ್ವಿ: ಮಾಜಿ ಸಂಸದ ಬಿ.ವಿ.ನಾಯಕ ಅವರ 59ನೇ ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಬೃಹತ್ ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಲಾಯಿತು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಕರೆಗುಡ್ಡ ಶ್ರೀ ಮಹಾಂತೇಶ್ವರ ಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಿ ಮಾತನಾಡಿದರು.

ಮಾಜಿ ಸಂಸದ ಬಿ.ವಿ.ನಾಯಕ ಅವರು ಅತ್ಯಂತ ಸರಳ ವ್ಯಕ್ತಿಯಾಗಿದ್ದು, ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ. ಜನ್ಮದಿನವನ್ನು ವೈಭವದಿಂದ ಆಚರಿಸಿಕೊಳ್ಳುವ ಬದಲು ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಅನಾಥರು, ವಿಶೇಷ ಚೇತನರಿಗೆ ಆಹಾರ ಮತ್ತು ಹಣ್ಣು ವಿತರಿಸುವ ಮೂಲಕ ಮಾದರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ಅವರು ಇನ್ನಷ್ಟು ಸಮಾಜಸೇವಾ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಚೀಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು, ನವಲಕಲ್ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು, ಉಟಕನೂರು ಶ್ರೀ ಮರಿಬಸವತಾತನವರ ಮಠದ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಅಡವಿ ಅಮರೇಶ್ವರ ಸುವರ್ಣಗಿರಿ ಮಠದ ಶ್ರೀ ತೋಂಟದಾರ್ಯ ಮಹಾಸ್ವಾಮಿಗಳು, ಕಲ್ಲೂರು ಮಠದ ಶ್ರೀ ಶಂಭುಲಿಂಗ ಮಹಾಸ್ವಾಮಿಗಳು ಹಾಗೂ ಮುಂಡರಗಿ ಮುದುಕಣ್ಣ ತಾತನವರು ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಸನ್ಮಾನಿಸಿ ಗೌರವಿಸಿದರು.

ಪಟ್ಟಣದ ಅಶ್ವಿನಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ದೇವದುರ್ಗ ರಕ್ತನಿಧಿ ಕೇಂದ್ರದ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಅಲ್ಲದೆ, ಪಟ್ಟಣದ ನೆರಳು ಅನಾಥಾಶ್ರಮ, ಶ್ರೀ ಚನ್ನಬಸವೇಶ್ವರ ಅಂಧ ಮಕ್ಕಳ ಶಾಲೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಸವನಗೌಡ ಬ್ಯಾಗವಾಟ, ಗಂಗಾಧರ ನಾಯಕ, ಮಾನ್ವಿ ಮಂಡಲ ಬಿಜೆಪಿ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ಕೆ. ನಾಗಲಿಂಗಸ್ವಾಮಿ, ಶರಣಪ್ಪ ನಕ್ಕುಂದಿ, ಮಲ್ಲಿಕಾರ್ಜುನ ಜಕ್ಕಲದಿನ್ನಿ, ದೋರೆಬಾಬು, ಕೆ. ನಾಗಕಲಿಂಗಸ್ವಾಮಿ, ಹನುಮೇಶ ನಾಯಕ ಸಾದಾಪುರ, ಮಲ್ಲಿಕಾರ್ಜುನಗೌಡ ಸಂಗಾಪುರ, ನರಸಿಂಹನಾಯಕ, ವೀರೇಶನಾಯಕ ಬೆಟ್ಟದೂರು, ರವಿಕುಮಾರ ಅಲ್ದಾಳ್, ವೀರನಗೌಡ, ನಾಗರಾಜ ಜಲ್ಲಿ, ಶರಣಪ್ಪಗೌಡ, ಸುರೇಶಗೌಡ, ಶರಣಬಸವನಾಯಕ, ಜಯಪ್ಪನಾಯಕ, ಶಿವಲಿಂಗಯ್ಯಸ್ವಾಮಿ, ಶಿವಕುಮಾರಸ್ವಾಮಿ, ಮಂಜುನಾಥ ನಾಯಕ, ಅಯ್ಯಪ್ಪ ನಾಯಕ ಮ್ಯಾಕಲ್, ಅಮರೇಶ ನಾಯಕ ಜಾನೇಕಲ್, ದುರುಗಪ್ಪ ತಡಕಲ್, ಜಗದೀಶ ಓತ್ತೂರು, ಶರಣಯ್ಯಸ್ವಾಮಿ, ಜಯರಾಜ್, ರಾಹುಲ್, ಗುರುಗೌಡ ಕಣ್ಣೂರು, ವಿಜಯ ಸುಂಕೇಶ್ವರ, ನವೀನ್ ಕುಮಾರ, ಭೀಮಣ್ಣ ಹರವಿ, ಕುಮಾರಸ್ವಾಮಿ, ಚಂದ್ರುನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

projectededore

Recent Posts

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ-ಎಸ್ಡಿಎಂಸಿ ಅಧ್ಯಕ್ಷ ಮಾನಶಯ್ಯ ಪೂಜಾರಿ

ಅರಕೇರಾ : ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹಾಗೂ ಸೃಜನಶೀಲ ಸಾಮರ್ಥ್ಯವನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಎಸ್ಡಿಎಂಸಿ…

2 hours ago

ಮಾನ್ವಿ: ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ – ಶಾಸಕ ಹಂಪಯ್ಯ ನಾಯಕ ಸೂಚನೆ

ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಕುಡಿಯುವ…

20 hours ago

ಬಸವೇಶ್ವರರ ಕುರಿತು ಆಕ್ಷೇಪಾರ್ಹ ಲೇಖನ, ವಿಡಿಯೋ: ಮಾನ್ವಿಯಲ್ಲಿ ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

ಮಾನ್ವಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಕುರಿತು ಆಕ್ಷೇಪಾರ್ಹ ಲೇಖನ ಮತ್ತು ವಿಡಿಯೋ ಪ್ರಸಾರ ಮಾಡಿರುವುದನ್ನು ಖಂಡಿಸಿ ಪಟ್ಟಣದ…

20 hours ago

ಕುಡಿಯುವ ನೀರಿಗಾಗಿ ಪರದಾಟ: ಏಪ್ರಿಲ್‌ನಲ್ಲಿ ಮನವಿ ಸಲ್ಲಿಸಿದರೂ ಕ್ಯಾರೆ ಎನ್ನದ ಅಧಿಕಾರಿಗಳು

​ ಸಮಸ್ಯೆ ಬಗೆಹರಿಸಲು ವಾರ್ಡ್ ನಂ. 03ರ ನಿವಾಸಿಗಳ ಆಗ್ರಹ ​ಸಿರವಾರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ. 03ರ…

20 hours ago

ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ – 38 ಬಾಟಲಿ ವಶ, ಆರೋಪಿ ಬಂಧನ

ರಾಯಚೂರು: ಮಾನವ ಜೀವಕ್ಕೆ ಅಪಾಯಕಾರಿಯಾದ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನೇತಾಜಿ ನಗರ ಠಾಣೆ ಪೊಲೀಸರು…

20 hours ago

ಕಾರ್ತಿಕ ಪೂರ್ಣಿಮೆ: ನ.24ರಂದು ಮಂತ್ರಾಲಯದಲ್ಲಿ ತುಂಗಾರತಿ, ಲಕ್ಷದೀಪೋತ್ಸವ

ಮಂತ್ರಾಲಯ: ಕಾರ್ತಿಕ ಪೂರ್ಣಿಮೆಯ ಅಂಗವಾಗಿ ನವೆಂಬರ್ 24ರಂದು ಸಂಜೆ 6 ಗಂಟೆಗೆ ಮಂತ್ರಾಲಯದ ಪವಿತ್ರ ತುಂಗಭದ್ರಾ ನದಿ ತೀರದಲ್ಲಿ 'ತುಂಗಾರತಿ–ಪುಣ್ಯನದಿ…

23 hours ago