ರಾಯಚೂರು

ಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಚೆಲುವ ಚಿಣ್ಣರು ಪುಸ್ತಕ ಬಹುಮಾನಕ್ಕೆ ಆಹ್ವಾನ

ರಾಯಚೂರು: ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಕೃತಿಗಳ ರಚನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ ಪತ್ರಿಕೆ ವತಿಯಿಂದ ರಾಜ್ಯಮಟ್ಟದ ಪುಸ್ತಕ ಬಹುಮಾನಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ಶಂಕರದೇವರು ಹಿರೇಮಠ ತಿಳಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಮಕ್ಕಳ ಸಾಹಿತ್ಯ ಕೃತಿಗಳಿಗೆ ‘ಚೆಲುವ ಚಿಣ್ಣರು ಪುಸ್ತಕ ಬಹುಮಾನ’ ನೀಡಲು ನಿರ್ಧರಿಸಲಾಗಿದೆ. 2022ರಿಂದ 2025ರ ಅವಧಿಯಲ್ಲಿ ಪ್ರಕಟಗೊಂಡಿರುವ ಕೃತಿಗಳನ್ನು ಸ್ಪರ್ಧೆಗೆ ಸಲ್ಲಿಸಬಹುದು. ಮಕ್ಕಳ ಕವಿತೆ ಮತ್ತು ಮಕ್ಕಳ ಕಥಾ ಸಂಕಲನ ಎಂಬ ಎರಡು ವಿಭಾಗಗಳಲ್ಲಿ ಬಹುಮಾನ ನೀಡಲಾಗುವುದು ಎಂದು ಹೇಳಿದರು.

ಪ್ರತಿ ವಿಭಾಗದಲ್ಲಿ ಆಯ್ಕೆಯಾಗುವ ವಿಜೇತರಿಗೆ ಪ್ರಶಸ್ತಿ ಫಲಕ, ಸನ್ಮಾನ ಪತ್ರ ಹಾಗೂ ₹3,000 ನಗದು ಬಹುಮಾನ ನೀಡಲಾಗುತ್ತದೆ. ನವೆಂಬರ್ ಕೊನೆಯ ವಾರದಲ್ಲಿ ಅಥವಾ ನಂತರ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.

ಸ್ಪರ್ಧೆಗೆ ಸಲ್ಲಿಸುವ ಕೃತಿಗಳು ಸ್ವತಂತ್ರ ರಚನೆಗಳಾಗಿರಬೇಕು. 2022ರಿಂದ 2025ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಗೊಂಡಿರಬೇಕು. ಕೃತಿಯ ನೋಂದಣಿ ಪತ್ರದ ನಕಲು ಪ್ರತಿಯನ್ನೂ ಲಗತ್ತಿಸಬೇಕು. ಪ್ರತಿ ವಿಭಾಗದಲ್ಲಿ ಭಾಗವಹಿಸುವವರು ಮೂರು ಕೃತಿಗಳನ್ನು ಕಳುಹಿಸಬೇಕು. ಈಗಾಗಲೇ ಪ್ರಶಸ್ತಿಗೆ ಸಲ್ಲಿಸಿರುವ ಕೃತಿಗಳನ್ನು ಮರುಸಲ್ಲಿಸಲು ಅವಕಾಶವಿಲ್ಲ. ಆಸಕ್ತರು ನವೆಂಬರ್ 10ರೊಳಗೆ ಕೃತಿಗಳನ್ನು ತಲುಪಿಸಬೇಕು. ಪ್ರಶಸ್ತಿಗೆ ಆಯ್ಕೆಯಾದವರು ಸಮಾರಂಭದಲ್ಲಿ ಖುದ್ದಾಗಿ ಭಾಗವಹಿಸಿ ಬಹುಮಾನ ಸ್ವೀಕರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಂದಲೂ ಸ್ವರಚಿತ ಕನ್ನಡ ಕವಿತೆಗಳನ್ನು ಆಹ್ವಾನಿಸಲಾಗಿದೆ. ಕವಿತೆಗಳು ವಿದ್ಯಾರ್ಥಿಗಳ ಸ್ವಂತ ರಚನೆಯಾಗಿರಬೇಕು. ಯಾವುದೇ ವ್ಯಕ್ತಿ, ಜಾತಿ, ಧರ್ಮ, ಪ್ರದೇಶ ಅಥವಾ ವೃತ್ತಿಗೆ ಅವಮಾನವಾಗುವ ಅಂಶಗಳು ಕವಿತೆಯಲ್ಲಿ ಇರಬಾರದು. ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ ಹಾಗೂ ಶಾಲೆಯ ದೃಢೀಕರಣ ಪತ್ರ ಸಲ್ಲಿಸಬೇಕು. ಒಬ್ಬ ವಿದ್ಯಾರ್ಥಿ ಒಂದು ಕವಿತೆಯನ್ನು ಮಾತ್ರ ಕಳುಹಿಸಬೇಕು. ಸ್ಪರ್ಧಿಗಳು ನಿಗದಿಪಡಿಸಿರುವ ಇತರ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ರಹ್ಮೇಂದ್ರ ರೆಡ್ಡಿ, ನರಸಿಂಹಲು ವಡವಾಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

projectededore

Recent Posts

ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ಮಣ್ಣಿನ ಸ್ನಾನದ ಶಿಬಿರ

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…

3 hours ago

ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…

1 day ago

ಮಂತ್ರಾಲಯದಲ್ಲಿ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…

1 day ago

ಆಗುಂಬೆ ಬಳಿ ಭೀಕರ ಅಪಘಾತ: ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ ಸ್ಥಳದಲ್ಲೇ ದುರ್ಮರಣ

ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…

1 day ago

ವಿಶೇಷ ವರದಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಕನ್ನಡಕ್ಕೇ ಅಪಮಾನ! ಎಐ ಸೃಷ್ಟಿಸಿದ ಶುಭಾಶಯ ಪೋಸ್ಟರ್‌ಗಳಲ್ಲಿ ಅಕ್ಷರಗಳ ಅಪಭ್ರಂಶ; ಕನ್ನಡಾಭಿಮಾನವೋ, ಕೇವಲ ಪ್ರದರ್ಶನವೋ?

ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…

1 day ago

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ. ಅಜಯ್ ಸಿಂಗ್

ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…

2 days ago