ರಾಯಚೂರು

ಚಿಕ್ಕಸುಗೂರಿನಲ್ಲಿ ಅ.30ರಂದು ಸಿದ್ದರಾಮೇಶ್ವರ ಮಹಾರಥೋತ್ಸವ: ಭಕ್ತಸಾಗರ ನಿರೀಕ್ಷೆ

ರಾಯಚೂರು: ತಾಲೂಕಿನ ಚಿಕ್ಕಸುಗೂರು ಗ್ರಾಮದ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಮಹಾರಥೋತ್ಸವ ಅ.30ರಂದು ಸಂಜೆ 5.30ಕ್ಕೆ ವೈಭವದಿಂದ ಜರುಗಲಿದೆ. 128ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಚಿಕ್ಕಸುಗೂರು ಚೌಕಿ ಮಠದ ಪೀಠಾಧ್ಯಕ್ಷ ಜಗದ್ಗುರು ಡಾ. ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.24ರಂದು ಆರಂಭಗೊಂಡಿರುವ ಜಾತ್ರಾ ಮಹೋತ್ಸವ ಅ.31ರವರೆಗೆ ನಡೆಯಲಿದೆ. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಧರ್ಮಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಗುರುವಾರ ಸಂಜೆ ಉಚ್ಛಾಯ ಮಹೋತ್ಸವ ನಡೆಯಲಿದೆ ಎಂದರು.

ಅ.30ರಂದು ಬೆಳಗ್ಗೆ ಶ್ರೀ ಸಿದ್ದರಾಮೇಶ್ವರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ನೆರವೇರಲಿದೆ. ನಂದಿಮಠದ ವೀರಸಿದ್ದ ಸ್ವಾಮಿಗಳು ಹಾಗೂ ಚಡಚಣ ವಿರಕ್ತಮಠದ ಷಡಕ್ಷರ ಸ್ವಾಮಿಗಳ ನೇತೃತ್ವದಲ್ಲಿ ರುದ್ರಾಭಿಷೇಕ ನಡೆಯಲಿದೆ. ಬಳಿಕ ಮಧ್ಯಾಹ್ನ ಗಣಾರಾಧನೆ ಹಾಗೂ ಧರ್ಮಸಭೆ ಜರುಗಲಿವೆ. ಸಂಜೆ 5.30ಕ್ಕೆ ಶ್ರೀ ಸಿದ್ದರಾಮೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿದ ರಥದ ಮಹಾರಥೋತ್ಸವ ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ ಎಂದು ಹೇಳಿದರು.

ಮಹಾರಥೋತ್ಸವದಲ್ಲಿ ದುಂಡಸಿ ವಿರಕ್ತಮಠದ ಕುಮಾರ ಮಹಾಸ್ವಾಮೀಜಿ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಹರಸೂರು ಕಲ್ಮಠದ ಕರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಾನ್ವಿ ಕಲ್ಮಠದ ಡಾ. ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ ಹಾಗೂ ವೈರಾಗ್ಯ ಶಿಖಾಮಣಿ ಅವಧೂತಗಿರಿ ಮಹಾರಾಜರು ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ.

ಜಾತ್ರಾ ಮಹೋತ್ಸವದ ಅಂಗವಾಗಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದ್ದು, ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅ.31ರಂದು ಉಚ್ಛಾಯ ಮಹೋತ್ಸವ ಹಾಗೂ ಸಾಂಪ್ರದಾಯಿಕ ಕಡುಬಿನ ಕಾಳಗ ನಡೆಯಲಿದೆ.

ಶ್ರೀ ಸಿದ್ದರಾಮೇಶ್ವರರ ಜಾತ್ರಾ ಮಹೋತ್ಸವವು ಧಾರ್ಮಿಕ ಪರಂಪರೆ ಹಾಗೂ ಭಕ್ತಿಯ ಸಂಭ್ರಮದ ಸಂಗಮವಾಗಿದ್ದು, ಜಿಲ್ಲೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಡಾ. ಸಿದ್ದಲಿಂಗ ಸ್ವಾಮೀಜಿ ಮನವಿ ಮಾಡಿದರು.

projectededore

Recent Posts

ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ಮಣ್ಣಿನ ಸ್ನಾನದ ಶಿಬಿರ

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…

3 hours ago

ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…

1 day ago

ಮಂತ್ರಾಲಯದಲ್ಲಿ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…

1 day ago

ಆಗುಂಬೆ ಬಳಿ ಭೀಕರ ಅಪಘಾತ: ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ ಸ್ಥಳದಲ್ಲೇ ದುರ್ಮರಣ

ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…

1 day ago

ವಿಶೇಷ ವರದಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಕನ್ನಡಕ್ಕೇ ಅಪಮಾನ! ಎಐ ಸೃಷ್ಟಿಸಿದ ಶುಭಾಶಯ ಪೋಸ್ಟರ್‌ಗಳಲ್ಲಿ ಅಕ್ಷರಗಳ ಅಪಭ್ರಂಶ; ಕನ್ನಡಾಭಿಮಾನವೋ, ಕೇವಲ ಪ್ರದರ್ಶನವೋ?

ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…

1 day ago

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ. ಅಜಯ್ ಸಿಂಗ್

ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…

2 days ago