ಮಾನ್ವಿ: ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳ ಜಾಲ ವಿಸ್ತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರುವಂತೆ ಶಿಕ್ಷಕರು ಹಾಗೂ ಪೋಷಕರು ನಿರಂತರ ಜಾಗೃತಿ ಮೂಡಿಸಬೇಕು ಎಂದು ಸಿವಿಲ್ ನ್ಯಾಯಾಧೀಶ ಆನಂದ ಎಚ್. ಕೊಣ್ಣೂರು ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಕ್ಷೇಮಾಭಿವೃದ್ಧಿ ಮಾರ್ಗದರ್ಶನ ಹಾಗೂ ಮಾದಕ ವಸ್ತು ಮುಕ್ತ ಭಾರತ ಅಭಿಯಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ಗುರು-ಶಿಷ್ಯ ಪರಂಪರೆಯನ್ನು ಕಾಣಲು ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಮಾದಕ ವಸ್ತುಗಳ ಮಾರಾಟಗಾರರು ಶಾಲಾ ಮಕ್ಕಳನ್ನೇ ಗುರಿಯಾಗಿಸಿಕೊಂಡು ಚಾಕೊಲೇಟ್ ಹಾಗೂ ಇತರ ಆಹಾರ ಪದಾರ್ಥಗಳಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಬೆರೆಸಿ ನೀಡುವ ಮೂಲಕ ಅವರನ್ನು ವ್ಯಸನಿಗಳನ್ನಾಗಿ ಮಾಡುವ ಅಪಾಯವಿದೆ. ಬಳಿಕ ಇಂತಹ ಮಕ್ಕಳನ್ನು ದುಷ್ಕೃತ್ಯಗಳಿಗೆ ಬಳಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದರು.
ಒಮ್ಮೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾದರೆ ಜೀವನದಲ್ಲಿ ಪ್ರಗತಿ ಸಾಧಿಸುವುದು ಕಷ್ಟವಾಗುತ್ತದೆ. ಶಾಲಾ ಪರಿಸರದಲ್ಲಿ ಮಾದಕ ವಸ್ತುಗಳ ಮಾರಾಟ ಅಥವಾ ಸೇವನೆ ಕಂಡುಬಂದಲ್ಲಿ ತಕ್ಷಣ ಶಿಕ್ಷಕರಿಗೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ವ್ಯಸನಕ್ಕೆ ಒಳಗಾದವರನ್ನು ಪುನರ್ವಸತಿ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಹಿರಿಯ ನ್ಯಾಯವಾದಿ ವಿಜಯಲಕ್ಷ್ಮಿ ಅವರು ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಕ್ಷೇಮಾಭಿವೃದ್ಧಿ ಮಾರ್ಗದರ್ಶನ ಹಾಗೂ ಮಾದಕ ವಸ್ತು ಮುಕ್ತ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ಮೆಹಬೂಬ್ ಪಾಷಾ, ವಕೀಲರ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ ಪಾಟೀಲ್, ಉಪಾಧ್ಯಕ್ಷ ವಿಶ್ವನಾಥರಾಯಪ್ಪ, ಜಂಟಿ ಕಾರ್ಯದರ್ಶಿ ಗೂಗಲ್ ನಾಗರಾಜ, ವಿಶ್ವನಾಥ ಪಾಟೀಲ್, ಬಸವರಾಜ ದೇವಿಪುರ, ಅಮೃತಾ, ಅನ್ಸರ್ ಅಲಿ, ಶ್ರೀನಿವಾಸ, ಶಿಕ್ಷಣ ಸಂಯೋಜಕ ಶ್ರೀಕಾಂತ ಬಾಗೇವಾಡಿ, ಎಎಸ್‌ಐ ಹನುಮೇಶ ಸೇರಿದಂತೆ ವಕೀಲರು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಕುಡಿಯುವ…
ಮಾನ್ವಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಕುರಿತು ಆಕ್ಷೇಪಾರ್ಹ ಲೇಖನ ಮತ್ತು ವಿಡಿಯೋ ಪ್ರಸಾರ ಮಾಡಿರುವುದನ್ನು ಖಂಡಿಸಿ ಪಟ್ಟಣದ…
ಸಮಸ್ಯೆ ಬಗೆಹರಿಸಲು ವಾರ್ಡ್ ನಂ. 03ರ ನಿವಾಸಿಗಳ ಆಗ್ರಹ ಸಿರವಾರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ. 03ರ…
ರಾಯಚೂರು: ಮಾನವ ಜೀವಕ್ಕೆ ಅಪಾಯಕಾರಿಯಾದ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನೇತಾಜಿ ನಗರ ಠಾಣೆ ಪೊಲೀಸರು…
ಮಂತ್ರಾಲಯ: ಕಾರ್ತಿಕ ಪೂರ್ಣಿಮೆಯ ಅಂಗವಾಗಿ ನವೆಂಬರ್ 24ರಂದು ಸಂಜೆ 6 ಗಂಟೆಗೆ ಮಂತ್ರಾಲಯದ ಪವಿತ್ರ ತುಂಗಭದ್ರಾ ನದಿ ತೀರದಲ್ಲಿ 'ತುಂಗಾರತಿ–ಪುಣ್ಯನದಿ…
ಗದಗ: ಭಾರತೀಯ ಜನತಾ ಯುವ ಮೋರ್ಚಾ ಗದಗ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಪ್ರಜಾಪ್ರಭುತ್ವ, ಅರಾಜಕತೆಯಲ್ಲ’ (Democracy, Not Anarchy)…