ರಾಯಚೂರು: ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವ ಉದ್ದೇಶದಿಂದ ಸೃಜನ ಸಂಘಟನಾ ಅಭಿಯಾನ–2ರ ಅಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ 10ರವರೆಗೆ ಅಭಿಯಾನ ನಡೆಯಲಿದ್ದು, ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಅರ್ಹ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಅಭಿಯಾನದ ವೀಕ್ಷಕ ರಾಜಶೇಖರ ಪಾಟೀಲ್ ಹುಮನಾಬಾದ್ ತಿಳಿಸಿದರು. (ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಆಯ್ಕೆ)
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಪಕ್ಷದ ಮುಖಂಡರು ಬ್ಲಾಕ್ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಈಗ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಮಾದರಿಯಲ್ಲೇ ಬ್ಲಾಕ್ ಅಧ್ಯಕ್ಷರ ಆಯ್ಕೆಯೂ ನಡೆಯಲಿದೆ ಎಂದರು.
ಮುಂದಿನ ದಿನಗಳಲ್ಲಿ ತಾಲೂಕುಗಳಿಗೆ ಭೇಟಿ ನೀಡಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಪ್ರತಿ ಬ್ಲಾಕ್‌ನಿಂದ ಮೂರು ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗುತ್ತದೆ. ಅಗತ್ಯವಿದ್ದಲ್ಲಿ ಗರಿಷ್ಠ ಐದು ಹೆಸರುಗಳನ್ನು ಕಳುಹಿಸಲು ಅವಕಾಶವಿದೆ. ಪಕ್ಷದ ಸಂಘಟನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಅಭಿಯಾನ ಪಾರದರ್ಶಕವಾಗಿ ನಡೆದಿದೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 14 ಬ್ಲಾಕ್ ಅಧ್ಯಕ್ಷರಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಸಾಮರ್ಥ್ಯ ಹೊಂದಿರುವ 30ರಿಂದ 60 ವರ್ಷದೊಳಗಿನವರನ್ನು ಆಯ್ಕೆ ಮಾಡಲು ಆದ್ಯತೆ ನೀಡಲಾಗುತ್ತದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವೀಕ್ಷಕ ಜಾನ್ ವೆಸ್ಲಿ ಮಾತನಾಡಿ, ಸೃಜನ ಸಂಘಟನಾ ಅಭಿಯಾನ–1 ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಕಾರ್ಯಕರ್ತರಲ್ಲಿ ಹೆಚ್ಚಿನ ಹುಮ್ಮಸ್ಸು ಮೂಡಿದೆ. ಎರಡನೇ ಹಂತದಲ್ಲಿ ಬ್ಲಾಕ್ ಅಧ್ಯಕ್ಷರ ಆಯ್ಕೆ ನಡೆಯುತ್ತಿದ್ದು, ನಿಗದಿತ ನಿಯಮಾವಳಿಗಳ ಪ್ರಕಾರವೇ ಪ್ರಕ್ರಿಯೆ ನಡೆಸಲಾಗುತ್ತದೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ ಉತ್ತಮ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಜಿ.ಕುಮಾರ ನಾಯಕ, ಶ್ರೀನಿವಾಸರೆಡ್ಡಿ, ಜಯಣ್ಣ, ರುದ್ರಪ್ಪ ಅಂಗಡಿ, ನರಸಿಂಹಲು ಮಾಡಗಿರಿ, ಜಿ. ಶಿವಮೂರ್ತಿ, ಜಯಂತ್ರಾವ್ ಪತಂಗೆ, ರಝಾಕ್ ಉಸ್ತಾದ್, ನಿರ್ಮಲಾ ಬೆಣ್ಣೆ, ಮರಿಸ್ವಾಮಿ ಗಟ್ಟು ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…
ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…
ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…
ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…
ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…
ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…