ರಾಯಚೂರು: ಗಾಣೇಕಲ್ ಜಲಾಶಯದಿಂದ ರಾಯಚೂರು ನಗರದ ಕೆಳಭಾಗದ ಪ್ರದೇಶಗಳಿಗೆ ಕುಡಿಯುವ ನೀರಿನ ಪೂರೈಕೆ ಹಾಗೂ ರೈತರ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 99ಎ, 100, 102 ಹಾಗೂ 102ಎ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದ್ದಾರೆ. (ಗಾಣೇಕಲ್ ಜಲಾಶಯದಿಂದ ನೀರು ಬಿಡುಗಡೆ)

ಜಲಾಶಯದಿಂದ ನೀರು ಬಿಡುಗಡೆ ಮಾಡಿರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗುವುದರ ಜತೆಗೆ ರೈತರು ತಮ್ಮ ಬೆಳೆಗಳಿಗೆ ನೀರುಣಿಸಲು ಸಹಕಾರಿಯಾಗಲಿದೆ. ಕುಡಿಯುವ ನೀರಿನ ಲಭ್ಯತೆ ಖಚಿತಪಡಿಸುವುದು ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಿನ ಸೌಲಭ್ಯ ಕಲ್ಪಿಸುವುದು ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

ನೀರಿನ ಹರಿವು ಮತ್ತು ವಿತರಣೆಯ ಮೇಲೆ ನಿರಂತರ ನಿಗಾ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೀರಿನ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸುವುದರ ಜತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನೀರಿನ ಸಮರ್ಪಕ ಬಳಕೆ ಮತ್ತು ವಿತರಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Previous articleರಕ್ತದಾನದ ಮೂಲಕ ಬೆಳ್ಳಿ ಮಹೋತ್ಸವಕ್ಕೆ ಅರ್ಥಪೂರ್ಣ ಆಚರಣೆ: ಎ. ವಸಂತಕುಮಾರ: ರಾಯಚೂರು ರಕ್ತದಾನ ಶಿಬಿರ