ರಾಯಚೂರು

ಅಯಿಜಾಪುರದಲ್ಲಿ ಜಾಗತಿಕ ಕೈತೊಳೆಯುವ ದಿನಾಚರಣೆ |

ರಾಯಚೂರು: ತಾಲೂಕಿನ ಅಯಿಜಾಪುರ ಗ್ರಾಮದಲ್ಲಿ ವಿಎಸ್‌ಟಿ ಮತ್ತು ಭವಿಷ್ಯ ಭಾರತ್ ಸಂಸ್ಥೆಯ ವತಿಯಿಂದ ಜಾಗತಿಕ ಕೈತೊಳೆಯುವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಭವಿಷ್ಯ ಭಾರತ್ ಸಂಸ್ಥೆಯ ರಾಯಚೂರು ಸಂಯೋಜಕ ಗಂಗಾಧರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಗುರಿ, ಉದ್ದೇಶಗಳು, ಯೋಜನೆಗಳು ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಭವಿಷ್ಯ ಭಾರತ್ ಸಂಸ್ಥೆ ಮತ್ತು ವಿಎಸ್‌ಟಿ ಸಂಜೀವಿನಿ ಸಂಚಾರಿ ವೈದ್ಯಕೀಯ ಘಟಕದ ವತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವುದರ ಜೊತೆಗೆ ಆರೋಗ್ಯ, ನೈರ್ಮಲ್ಯ ಮತ್ತು ವೈಯಕ್ತಿಕ ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ್ದಾಗಿದೆ ಎಂದು ತಿಳಿಸಿದರು.

ನಂತರ ಡಾ. ವನಿತಾ ಅವರು ದೈನಂದಿನ ಜೀವನದಲ್ಲಿ ಕೈತೊಳೆಯುವ ಮಹತ್ವದ ಕುರಿತು ಮಾಹಿತಿ ನೀಡಿದರು. ಊಟ ಮಾಡುವ ಮೊದಲು, ಶೌಚಾಲಯ ಬಳಸಿದ ನಂತರ, ಅಡುಗೆ ಮಾಡುವ ಮೊದಲು, ಮಕ್ಕಳಿಗೆ ಆಹಾರ ನೀಡುವ ಮೊದಲು ಹಾಗೂ ಕೆಮ್ಮಿದ ಅಥವಾ ಸೀನಿದ ನಂತರ ಸಾಬೂನು ಮತ್ತು ಶುದ್ಧ ನೀರಿನಿಂದ ಕೈತೊಳೆಯುವುದು ಅತ್ಯಗತ್ಯ ಎಂದು ತಿಳಿಸಿದರು.

ಕೈತೊಳೆಯುವ ಸರಿಯಾದ ವಿಧಾನವನ್ನು ವಿವರಿಸಿದ ಅವರು, ಮೊದಲು ಕೈಗಳನ್ನು ನೀರಿನಿಂದ ಒದ್ದೆ ಮಾಡಿಕೊಂಡು ಸಾಬೂನು ಹಚ್ಚಬೇಕು. ನಂತರ ಅಂಗೈ, ಕೈಗಳ ಹಿಂಭಾಗ, ಬೆರಳುಗಳ ನಡುವಿನ ಭಾಗ, ಹೆಬ್ಬೆರಳು, ಉಗುರುಗಳ ಕೆಳಭಾಗ ಹಾಗೂ ಬೆರಳ ತುದಿಗಳನ್ನು ಚೆನ್ನಾಗಿ ಉಜ್ಜಬೇಕು. ಕನಿಷ್ಠ 20 ಸೆಕೆಂಡುಗಳ ಕಾಲ ಸಾಬೂನಿನಿಂದ ಕೈಗಳನ್ನು ಉಜ್ಜಿ, ಬಳಿಕ ಶುದ್ಧ ನೀರಿನಿಂದ ತೊಳೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭವಿಷ್ಯ ಭಾರತ್ ಸಂಸ್ಥೆಯ ಸಿಬ್ಬಂದಿಗಳಾದ ಎಂ.ಡಿ. ರೆಹನುಲ್ಲಾ, ಉರುಕುಂದ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು ಹಾಗೂ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.

projectededore

Recent Posts

ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ಮಣ್ಣಿನ ಸ್ನಾನದ ಶಿಬಿರ

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…

6 hours ago

ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…

1 day ago

ಮಂತ್ರಾಲಯದಲ್ಲಿ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…

1 day ago

ಆಗುಂಬೆ ಬಳಿ ಭೀಕರ ಅಪಘಾತ: ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ ಸ್ಥಳದಲ್ಲೇ ದುರ್ಮರಣ

ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…

1 day ago

ವಿಶೇಷ ವರದಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಕನ್ನಡಕ್ಕೇ ಅಪಮಾನ! ಎಐ ಸೃಷ್ಟಿಸಿದ ಶುಭಾಶಯ ಪೋಸ್ಟರ್‌ಗಳಲ್ಲಿ ಅಕ್ಷರಗಳ ಅಪಭ್ರಂಶ; ಕನ್ನಡಾಭಿಮಾನವೋ, ಕೇವಲ ಪ್ರದರ್ಶನವೋ?

ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…

2 days ago

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ. ಅಜಯ್ ಸಿಂಗ್

ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…

2 days ago