ಸಿರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪಟ್ಟಣದ ಇಂದಿರಾ ನಗರದ ‘ರಂಗಶಿವ’ ಜ್ಞಾನ ವಿಕಾಸ ಕೇಂದ್ರದಲ್ಲಿ ಬುಧವಾರ ಸಂಜೆ ಹೊಸ ರುಚಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರದ ಸದಸ್ಯರು ವಿವಿಧ ಬಗೆಯ ನೂತನ ಖಾದ್ಯಗಳನ್ನು ತಯಾರಿಸಿ ಪರಸ್ಪರ ಹಂಚಿಕೊಂಡು ರುಚಿ ಸವಿದರು.
ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಯೋಜನೆಯ ಸಮನ್ವಯಾಧಿಕಾರಿ ಯಶೋಧ, ಕೇಂದ್ರದ ಅಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಹನುಮಂತಮ್ಮ, ಭಾಗ್ಯ, ಸೇವಾ ಪ್ರತಿನಿಧಿ ಸೌಮ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.








