ಸಿರವಾರ: ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀಕೃಷ್ಣನ ಭಾವಚಿತ್ರ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಗ್ರಾಮದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಜನೆ, ಕೀರ್ತನೆಯೊಂದಿಗೆ ಮೆರವಣಿಗೆ ನಡೆಸಲಾಯಿತು.
ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಶರಣಯ್ಯನಾಯಕ ಅವರು, “ಮಹಾಭಾರತ ಯುದ್ಧದ ಸಂದರ್ಭದಲ್ಲಿ ಅರ್ಜುನನಿಗೆ ಶ್ರೀಕೃಷ್ಣ ಬೋಧಿಸಿದ ಸಂದೇಶದಂತೆ, ಪ್ರತಿಯೊಬ್ಬರು ತಮಗೆ ವಹಿಸಿದ ಕಾರ್ಯ ಹಾಗೂ ಜವಾಬ್ದಾರಿಯನ್ನು ನಿಷ್ಪಕ್ಷಪಾತವಾಗಿ ಯಶಸ್ವಿಯಾಗಿ ನಿರ್ವಹಿಸಿದಾಗ ಉತ್ತಮ ಫಲ ತಾನಾಗಿಯೇ ಲಭಿಸುತ್ತದೆ. ಆದ್ದರಿಂದ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜಕ್ಕೆ ಹಿತಕಾರಿಯಾಗಿ ಬದುಕೋಣ” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ದೇವೇಂದ್ರಪ್ಪ ಬೊಮ್ಮನಾಳ, ಯಾದವ ಸಮಾಜದ ತಾಲೂಕು ಅಧ್ಯಕ್ಷ ನಾಗಪ್ಪ ಯಾದವ್, ಬಜ್ಜಣ್ಣ, ವೆಂಕಟೇಶ ಯಾದವ್, ಪಕೀರಪ್ಪ ಯಾದವ್, ಬಸವರಾಜ ನಾಯಕ ಸೇರಿದಂತೆ ಯಾದವ ಸಮಾಜದ ಮುಖಂಡರು ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು.
ಕೊಪ್ಪಳದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾದಕ ವ್ಯಸನ ನಿರ್ಮೂಲನೆ, ಯುವಜನರಲ್ಲಿ ಜಾಗೃತಿ ಮತ್ತು ಅಕ್ರಮ…
ರಾಯಚೂರು: ರಾಯಚೂರು ನ್ಯಾಯವಾದಿಗಳ ಸಂಘ ಹಾಗೂ ನ್ಯಾಯಾಂಗ ಇಲಾಖೆಯ ವತಿಯಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.…
ರಾಯಚೂರು: ಜಿಲ್ಲೆಯ ಲಿಂಗಸುಗೂರು ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿ ಕೈಗೊಂಡಿರುವ…
ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ…
ರಾಯಚೂರು: ಸ್ವಚ್ಛತೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಬೇಕು. ಸುತ್ತಲಿನ ಪರಿಸರ ಶುಚಿತ್ವದಿಂದ ಕೂಡಿದ್ದರೆ ಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ…
ಕನ್ನಡ ಮತ್ತು ಹಿಂದಿ ಎರಡೂ ಭಾಷೆಗಳಲ್ಲಿ ಛಂದೋಬದ್ಧ ಪದ್ಯಗಳನ್ನು ರಚಿಸಿದ ಶಬ್ದ ಗಾರುಡಿಗ ಗುರುಶ್ರೀ ವಿ.ಎಸ್. ಕಾಂತನವರ ಅವರ ಸಾಹಿತ್ಯ…