ರಾಯಚೂರು: ನವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀ ಕಂದಗಡ್ಡೆ ಮಾರೆಮ್ಮದೇವಿ ಜಾತ್ರಾ ಮಹೋತ್ಸವವನ್ನು ಅಕ್ಟೋಬರ್ 20 ಮತ್ತು 21ರಂದು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.
ಅಕ್ಟೋಬರ್ 20ರಂದು ಮಂಗಳವಾರ ಆಯುಧ ಪೂಜೆಯ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ವಿಶೇಷ ಪೂಜೆ ನಡೆಯಲಿದೆ. ರಾತ್ರಿ 10 ಗಂಟೆಯಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಭಜನೆ ಕಾರ್ಯಕ್ರಮ ಜರುಗಲಿದೆ.
ಅಕ್ಟೋಬರ್ 21ರಂದು ಬುಧವಾರ ವಿಜಯದಶಮಿ ಅಂಗವಾಗಿ ಸಂಜೆ 6.30 ಗಂಟೆಗೆ ಉಚ್ಛಾಯ ಮೆರವಣಿಗೆ ನಡೆಯಲಿದ್ದು, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ ನೆರವೇರಲಿದೆ.
ಜಾತ್ರಾ ಮಹೋತ್ಸವದ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಅರ್ಚಕ ಬಿ. ಬಾಲಚಂದ್ರ ಪೂಜಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.








