ಬೆಂಗಳೂರು: ಕರ್ನಾಟಕದ ಮಾಧ್ಯಮ ಮತ್ತು ಮನರಂಜನಾ ವಲಯವನ್ನು ಬಲಪಡಿಸುವುದು, ಸಾಂಸ್ಥಿಕ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಮಾಧ್ಯಮ ಉದ್ಯಮಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಚಂಚಲ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಸಭೆ ನಡೆಸಿದರು.
ರಾಜ್ಯದ ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ಉಪಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿಶೇಷವಾಗಿ 2027ರಲ್ಲಿ ನಡೆಯಲಿರುವ ವೇವ್ಸ್ (WAVES) ಶೃಂಗಸಭೆಯಲ್ಲಿ ಕರ್ನಾಟಕದ ಭಾಗವಹಿಸುವಿಕೆ, ರಾಜ್ಯದ ಮಾಧ್ಯಮ ಮತ್ತು ಮನರಂಜನಾ ಉದ್ಯಮಗಳು, ಸೃಜನಶೀಲ ಪ್ರತಿಭೆಗಳು ಹಾಗೂ ಹೂಡಿಕೆ ಅವಕಾಶಗಳನ್ನು ಪರಿಚಯಿಸಲು ವಿಶೇಷ ರಾಜ್ಯ ಪೆವಿಲಿಯನ್ ಸ್ಥಾಪಿಸುವ ಕುರಿತು ಚರ್ಚೆ ನಡೆಯಿತು.
ಇದರೊಂದಿಗೆ ‘ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜಸ್–ಸೀಸನ್ 2’ರಲ್ಲಿ ವಿದ್ಯಾರ್ಥಿಗಳು ಮತ್ತು ಸೃಜನಶೀಲ ಕ್ಷೇತ್ರದವರ ಭಾಗವಹಿಸುವಿಕೆ ಹಾಗೂ ವೇವ್ಸ್ ಶೃಂಗಸಭೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.
ಕರ್ನಾಟಕ ಮೂಲದ ನವೋದ್ಯಮಗಳಿಗೆ ವೇವ್ ಎಕ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲಾಯಿತು. ಉದ್ಯಮಗಳಿಗೆ ಸೂಕ್ತ ಪಾಲುದಾರರನ್ನು ಗುರುತಿಸುವುದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶ ಕಲ್ಪಿಸುವುದು ಹಾಗೂ ವೇವ್ಸ್ ಬಜಾರ್‌ನಲ್ಲಿ ಕಂಟೆಂಟ್ ನಿರ್ಮಾಪಕರು, ಸ್ಟುಡಿಯೋಗಳು, ಖರೀದಿದಾರರು ಮತ್ತು ವಿತರಕರನ್ನು ಒಳಗೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು.
ಸರ್ಕಾರಿ ಸಂವಹನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಭಾರತೀಯ ಸಮೂಹ ಸಂವಹನ ಸಂಸ್ಥೆ (ಐಐಎಂಸಿ) ಸಹಯೋಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ವ್ಯವಸ್ಥಿತ ತರಬೇತಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲಾಯಿತು.
ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಕಾಯ್ದೆ–2023ರ ಅಡಿಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಪರಿವರ್ತನೆ ಪ್ರಕ್ರಿಯೆ ತ್ವರಿತಗೊಳಿಸಲು ಪ್ರೆಸ್ ಸೇವಾ ಪೋರ್ಟಲ್‌ನ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವುದು, ಪ್ರಾದೇಶಿಕ ಭಾಷೆಯ ಚಲನಚಿತ್ರಗಳು ಹೆಚ್ಚಿನ ಜನರನ್ನು ತಲುಪಲು ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಚಿತ್ರಮಂದಿರಗಳನ್ನು ಉತ್ತೇಜಿಸುವುದು ಹಾಗೂ ಕೇಬಲ್ ಆಪರೇಟರ್‌ಗಳಿಗೆ ಪಾರದರ್ಶಕ ಮತ್ತು ನಿಗದಿತ ಕಾಲಮಿತಿಯೊಳಗಿನ ‘ರೈಟ್ ಆಫ್ ವೇ’ ವ್ಯವಸ್ಥೆ ರೂಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಆಕಾಶವಾಣಿ ಕೇಂದ್ರದಲ್ಲಿ ಸಚಿವಾಲಯದ ಅಧೀನದಲ್ಲಿರುವ ವಿವಿಧ ಮಾಧ್ಯಮ ಘಟಕಗಳ ಮುಖ್ಯಸ್ಥರೊಂದಿಗೆ ಚಂಚಲ್ ಕುಮಾರ್ ಸಂವಾದ ನಡೆಸಿದರು. ಸಭೆಯಲ್ಲಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೃಷ್ಣ ಕುಮಾರ್ ನಿರಾಲಾ ಉಪಸ್ಥಿತರಿದ್ದರು.
ಸಂವಾದದಲ್ಲಿ ಮಾತನಾಡಿದ ಚಂಚಲ್ ಕುಮಾರ್, ಪ್ರಸ್ತುತ ಸಂದರ್ಭದಲ್ಲಿ ಡಿಜಿಟಲ್ ಮಾಧ್ಯಮದ ಪಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರದ ಕಲ್ಯಾಣ ಯೋಜನೆಗಳು ಮತ್ತು ವಿವಿಧ ಉಪಕ್ರಮಗಳ ಕುರಿತ ವಿಶ್ವಾಸಾರ್ಹ ಮಾಹಿತಿಯನ್ನು ಹೆಚ್ಚಿನ ಜನರಿಗೆ ತಲುಪಿಸಲು ಡಿಜಿಟಲ್ ಮಾಧ್ಯಮಗಳನ್ನು ವ್ಯಾಪಕವಾಗಿ ಬಳಸಿಕೊಳ್ಳಬೇಕು ಎಂದು ಮಾಧ್ಯಮ ಘಟಕಗಳಿಗೆ ಕರೆ ನೀಡಿದರು.
ಸಾರ್ವಜನಿಕ ಕಲ್ಯಾಣ ಯೋಜನೆಗಳ ಮಾಹಿತಿಯನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡುವ ಮೂಲಕ ಅವುಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಮಾಧ್ಯಮ ಘಟಕಗಳ ಕಾರ್ಯಚಟುವಟಿಕೆಗಳಿಗೆ ಹೊಸ ದೃಷ್ಟಿಕೋನ, ನವೀನ ಆಲೋಚನೆ ಹಾಗೂ ಹೊಸ ಕಾರ್ಯವಿಧಾನಗಳನ್ನು ಪರಿಚಯಿಸಲು ಯುವ ಪ್ರತಿಭೆಗಳನ್ನು ಸೇರ್ಪಡೆಗೊಳಿಸುವ ಅಗತ್ಯವಿದೆ ಎಂದು ಒತ್ತಿಹೇಳಿದರು.
ಸಭೆಯಲ್ಲಿ ವಿವಿಧ ಮಾಧ್ಯಮ ಘಟಕಗಳ ಸಾಧನೆಗಳು ಹಾಗೂ ಕಾರ್ಯನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು.
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…
ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…
ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…
ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…
ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…
ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…