ಕವಿತಾಳ: ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನಿಗೆ ಬಾಯಿಗೆ ಬಟ್ಟೆ ಕಟ್ಟಿ ಕಟ್ಟಿಗೆಯಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಆರೋಪದಡಿ ಮದರಸಾದ ಶಿಕ್ಷಕನನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ.
ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ (ರಿ)ನಲ್ಲಿ ಬಾಲಕ ಕಳೆದ ಎರಡು ವರ್ಷಗಳಿಂದ ವಿದ್ಯಾಭ್ಯಾಸ ಮಾಡುತ್ತಿದ್ದ. ನ.8ರಂದು ಸಂಜೆ ಬಾಲಕನನ್ನು ಮಾತನಾಡಿಸಲು ಪೋಷಕರು ಸಂಬಂಧಿಯೊಂದಿಗೆ ಮದರಸಾಕ್ಕೆ ತೆರಳಿದಾಗ ಶಿಕ್ಷಕನ ಹಲ್ಲೆಯ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ದೂರಿನ ಪ್ರಕಾರ, ನ.3ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮದರಸಾದ ಶಿಕ್ಷಕ ಅಬ್ಬಾಸ ಅಲಿ ಎಂಬಾತ ಬಾಲಕನಿಗೆ ಸರಿಯಾಗಿ ಓದಲು ಬರುವುದಿಲ್ಲ ಎಂದು ಬಾಯಿಗೆ ಬಟ್ಟೆ ಕಟ್ಟಿ ಕಟ್ಟಿಗೆಯಿಂದ ಎರಡು ಕಣ್ಣುಗಳು, ಕಪಾಳ, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಹಲ್ಲೆ ನಡೆಸಿದ್ದಾನೆ. ಇದರಿಂದ ಬಾಲಕನ ಎರಡೂ ಕಣ್ಣುಗಳಲ್ಲಿ ರಕ್ತ ಹೆಪ್ಪುಗಟ್ಟಿ ದೃಷ್ಟಿ ಮಂಜಾಗಿದ್ದು, ತಲೆಗೆ ಒಳಪೆಟ್ಟಾಗಿ ಊತ ಉಂಟಾಗಿದೆ. ದೇಹದ ಇತರ ಭಾಗಗಳಿಗೂ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದೇ ವೇಳೆ, ಇತರ ಆರೋಪಿತರು ಬಾಲಕನಿಗೆ ಇನ್ನಷ್ಟು ಹೊಡೆದರೆ ಚೆನ್ನಾಗಿ ಓದುತ್ತಾನೆ ಎಂದು ಪ್ರಚೋದನೆ ನೀಡಿದ್ದಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಹೊಡೆದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡ ಬಾಲಕನನ್ನು ಪೋಷಕರು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಕುಟುಂಬದವರೊಂದಿಗೆ ಚರ್ಚಿಸಿ ತಡವಾಗಿ ಕವಿತಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣದ ಆರೋಪಿ ಅಬ್ಬಾಸ ಅಲಿ (26), ತಂದೆ ನಜೀಮುದ್ದೀನ್, ಕವಿತಾಳ ನಿವಾಸಿ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂತ್ರಾಲಯ: ಉತ್ತಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವನ್ನು ಭಕ್ತಿಭಾವ ಮತ್ತು…
ಸಿರವಾರ: "ನಮ್ಮ ಮಕ್ಕಳು ಓದಿನಿಂದ ದೂರವಾದರೆ, ಸಮಾಜ ಮುಂದೆ ಹೋಗಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿಗೆ ಶಿಕ್ಷಣ ಕೊಡಿಸುವುದೇ…
ಮಾನ್ವಿ: ಡಿಸ್ಟ್ರಿಬ್ಯೂಟರ್ 82ರ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ಸುಮಾರು 3 ಸಾವಿರ ಎಕರೆ ಪ್ರದೇಶದಲ್ಲಿ…
ಶಹಾಪುರ: ರೈತರ ಬೆಳೆಗಳು ಒಣಗುತ್ತಿದ್ದರೂ ಶಾಸಕರಿಗೆ ಕಾಳಜಿಯಿಲ್ಲ. ಏಳು ಶಾಸಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕಾಲುವೆಗಳಿಗೆ ನೀರು ಬಿಡುಗಡೆ…
ಮಾನ್ವಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ನೇಗಿಲುಯೋಗಿ ಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ಸುಲಭವಾಗಿ ಮತ್ತು…
ಮಾನ್ವಿ: ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಅನೇಕ ಬಾರಿ ಹೇಳಿದರು ಕೂಡ ಕಾಲುವೆಯಲ್ಲಿ ಸರಿಯಾಗಿ ಗೇಜ್ ನಿರ್ವಾಹಣೆ ಮಾಡದೆ ಇರುವುದರಿಂದ ಮಾನ್ವಿ…