ರಾಜ್ಯ

ಸೆ.5ರಂದು ಕೂಡ್ಲಿಗಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಪ್ರಾಜಾಸೇವೆ ಆಂದೋಲನದ ರಾಜ್ಯಮಟ್ಟದ ಮೊದಲ ಜನಸ್ಪಂದನ ಕಾರ್ಯಕ್ರಮ

ಕೂಡ್ಲಿಗಿ: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸುತ್ತಿರುವ ‘ಪ್ರಜಾಸೇವೆ ಅಭಿಯಾನ’ದ ರಾಜ್ಯಮಟ್ಟದ ಮೊದಲ ಜನಸ್ಪಂದನ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ಕೂಡ್ಲಿಗಿಯಲ್ಲಿ ನಡೆಯಲಿದೆ.

ಸಿಎಂ ಡಿ.ಕೆ.ಶಿವಕುಮಾರ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳು ಹಾಗೂ ದೂರುಗಳನ್ನು ಸ್ವೀಕರಿಸಿ, ಅವುಗಳಿಗೆ ಪರಿಹಾರ ಒದಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಕೆಪಿಎಸ್‌ಸಿ ಹಗರಣಗಳ ಮೂಲ ಬಿಜೆಪಿ–ಜೆಡಿಎಸ್ ಆಡಳಿತದಲ್ಲೇ: ಡಿಕೆ ಶಿವಕುಮಾರ್ ಆರೋಪ

ಹೇಗೆ ನಡೆಯಲಿದೆ ಜನಸ್ಪಂದನ?
ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಿಂಗಳ ಪ್ರತಿ ಶನಿವಾರ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಸಭೆ ನಡೆಸುವ ವ್ಯವಸ್ಥೆ ಮಾಡಲಾಗಿದೆ. ಇದರ ಭಾಗವಾಗಿ ಕೂಡ್ಲಿಗಿಯಲ್ಲಿ ಸೆ.5ರಂದು ರಾಜ್ಯಮಟ್ಟದ ಮೊದಲ ಜನಸ್ಪಂದನ ಆಯೋಜಿಸಲಾಗಿದೆ.
ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ‘ಗ್ರಾಮ ಒನ್’ ಮತ್ತು ‘ಕರ್ನಾಟಕ ಒನ್’ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಅರ್ಜಿ ಹಾಗೂ ದೂರುಗಳನ್ನು ಯಾವುದೇ ಶುಲ್ಕವಿಲ್ಲದೆ ಸಲ್ಲಿಸಬಹುದಾಗಿದೆ. ಇದಕ್ಕಾಗಿ ಅಗತ್ಯ ಕಂಪ್ಯೂಟರ್ ವ್ಯವಸ್ಥೆ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.
ಜನರಿಂದ ಸ್ವೀಕರಿಸುವ ದೂರುಗಳನ್ನು ಎರಡು ವಿಭಾಗಗಳಲ್ಲಿ ದಾಖಲಿಸಲಾಗುತ್ತದೆ. ಹೊಸದಾಗಿ ಸಲ್ಲಿಕೆಯಾಗುವ ದೂರುಗಳು ಒಂದು ವಿಭಾಗದಲ್ಲಿದ್ದರೆ, IPGRS ಪೋರ್ಟಲ್‌ನಲ್ಲಿ ದಾಖಲಾಗಿ 21 ದಿನಗಳ ಗಡುವಿನ ಬಳಿಕವೂ ಇತ್ಯರ್ಥವಾಗದ ದೂರುಗಳು ಅಥವಾ ದೊರೆತ ಪರಿಹಾರದಿಂದ ದೂರುದಾರರು ಅತೃಪ್ತರಾಗಿರುವ ಪ್ರಕರಣಗಳನ್ನು ಮತ್ತೊಂದು ವಿಭಾಗದಲ್ಲಿ ಪರಿಗಣಿಸಲಾಗುತ್ತದೆ.
ಪ್ರತಿ ಬುಧವಾರ ಮೂರು ಹಂತಗಳಲ್ಲಿ ಪರಿಶೀಲನೆ
ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ದೂರುಗಳ ವಿಲೇವಾರಿಗೆ ಪ್ರತಿ ಬುಧವಾರ ಮೂರು ಹಂತಗಳಲ್ಲಿ ಪರಿಶೀಲನೆ ನಡೆಯಲಿದೆ.
ಬೆಳಗ್ಗೆ 9ರಿಂದ 11ರವರೆಗೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ದೂರುಗಳ ಪರಿಶೀಲನೆ ನಡೆಯಲಿದೆ.
ದೂರುಗಳ ಇತ್ಯರ್ಥದಿಂದ ತೃಪ್ತರಾಗದ ಸಾರ್ವಜನಿಕರಿಗೆ ಪರಿಶೀಲನಾ ಸಭೆಗಳಲ್ಲಿ ನೇರವಾಗಿ ಭಾಗವಹಿಸಿ, ಸಂಬಂಧಪಟ್ಟ ಅಧಿಕಾರಿಗಳ ಎದುರು ತಮ್ಮ ಅಹವಾಲು ಮಂಡಿಸಲು ಅವಕಾಶವಿರಲಿದೆ.
ಅಲ್ಲದೆ, ಅಭಿಯಾನದ ಸಂದರ್ಭದಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಇಲಾಖೆಗಳ ಐಇಸಿ ಅನುದಾನ ಬಳಸಿಕೊಳ್ಳಲು ಸೂಚಿಸಲಾಗಿದೆ.
ಪ್ರಜಾಸೇವೆ ಅಭಿಯಾನದಡಿ ತಿಂಗಳ 2ನೇ ಮತ್ತು 4ನೇ ಶನಿವಾರ ಕರ್ತವ್ಯ ನಿರ್ವಹಿಸುವ ಗ್ರೂಪ್ ‘ಸಿ’ ಮತ್ತು ‘ಡಿ’ ನೌಕರರಿಗೆ ಜಿಲ್ಲಾಧಿಕಾರಿ ಹಂತದಲ್ಲೇ ಪರಿಹಾರ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಗ್ರೂಪ್ ‘ಎ’ ಮತ್ತು ‘ಬಿ’ ನೌಕರರಿಗೆ ಪ್ರತ್ಯೇಕ ಆದೇಶ ಹೊರಡಿಸಲಾಗುತ್ತದೆ.

projectededore

Recent Posts

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…

5 hours ago

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

6 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

6 hours ago

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…

7 hours ago

ಶ್ರೀರಾಮುಲು ಹೇಳಿಕೆ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ: ‘ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಮಾತನಾಡಿದರೆ ಸುಮ್ಮನಿರಲ್ಲ’

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…

10 hours ago

ಮಂತ್ರಾಲಯದ ರಾಯರ ದರ್ಶನ ಪಡೆದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ

ಸಿರವಾರ : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ನಿಮಿತ್ತ ಜೆಡಿಎಸ್ ನ ಜನಪ್ರಿಯ ನಾಯಕರು ಹಾಗೂ…

10 hours ago