ಮಾನ್ವಿ: ಪಟ್ಟಣದ ಬಿ.ವಿ.ಆರ್. ಇ.ಟೆಕ್ನೋ ಶಾಲಾ ಆವರಣದಲ್ಲಿ ನಡೆದ ಬಿ.ವಿ.ಆರ್. ಎಜ್ಯುಕೇಷನ್ ಟ್ರಸ್ಟ್ ಸಂಸ್ಥಾಪಕರಾದ ಬಿ.ವೀರಾರೆಡ್ಡಿ ಹಾಗೂ ಬಿ.ಜಯಮ್ಮ ರವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ರಾಜಾ ಸುಭಾಶ್ಚಂದ್ರನಾಯಕ ಉದ್ಘಾಟಿಸಿ ಮಾತನಾಡಿ ತಾಲೂಕಿನ ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ಮಕ್ಕಳಿಗೆ ಪಠ್ಯ ಶಿಕ್ಷಣವನ್ನು ನೀಡದೆ ಉತ್ತಮ ಸಂಸ್ಕಾರ,ಸಂಸ್ಕೃತಿಯ ಬಗ್ಗೆ ತಿಳಿಸಿಕೊಡುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಬಿ.ವಿ.ಆರ್. ಕುಟುಂಬದವರು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದಂತ ಸಮಯದಲ್ಲಿ ಬಿ.ವೀರಾರೆಡ್ಡಿ ಹಾಗೂ ಬಿ.ಜಯಮ್ಮ ರವರು ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ಈ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದಕ್ಕೆ ಹೆಚ್ಚಿನ ಅದ್ಯಾತೆಯನ್ನು ನೀಡಿದ್ದರು. ಅವರ ನಂತರ ಕುಟುಂಬದವರು ಶಿಕ್ಷಣ ಸಂಸ್ಥೆಯನ್ನು ಮುಂದುವರೆಸಿಕೊಂಡು ಹೊಗುತ್ತಿದ್ದಾರೆ ಎಂದು ತಿಳಿಸಿದರು.
ಬಿ.ವಿ.ಆರ್. ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಬಿ.ವಿ.ರೆಡ್ಡಿ ಮಾತನಾಡಿ ನಮ್ಮ ತಂದೆ ಬಿ.ವೀರಾರೆಡ್ಡಿ ಹಾಗೂ ತಾಯಿ ಬಿ.ಜಯಮ್ಮ ರವರ ಆಶಯದಂತೆ ಶಾಲೆಯಲ್ಲಿನ ಬಡ ಮಕ್ಕಳಿಗೆ ಕಡಿಮೆ ಶುಲ್ಕವನ್ನು ಪಡೆಯಲಾಗುತ್ತಿದೆ ನಮ್ಮ ಶಾಲೆಯ ಶಿಕ್ಷಕರ ಪರಿಶ್ರಮದಿಂದಾಗಿ ಈ ಬಾರಿಯ ಎಸ್.ಎಸ್.ಎಲ್.ಸಿ, ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ‍್ಯಾಂಕ್ ಪಡೆಯುವುದಕ್ಕೆ ಸಾಧ್ಯವಾಗಿದೆ ಎಂದು ತಿಳಿಸಿದರು. ಎಸ್.ಎಸ್.ಎಲ್.ಸಿ, ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿ ಸುಖದೇವ ರವರಿಗೆ 1 ಲಕ್ಷರೂ ಚೆಕ್ ನೀಡಿ ಗೌರವಿಸಲಾಯಿತು ದ್ವೀತೀಯ ಸ್ಥಾನ ಪಡೆದ ಸಿದ್ದಾರ್ಥ, ಪ್ರೀಯಾ, ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಪಡೆದು ವೈದ್ಯಾಕೀಯ ಅಧ್ಯಯನ ನಡೆಸುತ್ತಿರುವ ಹಾಸಿನಿರವರನ್ನು ನಗದು ಬಹುಮಾನ ದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ, ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವುದಕ್ಕೆ ಶ್ರಮಿಸಿದ ಶಿಕ್ಷಕರಿಗೆ ನಗದು ಬಹುಮಾನ ದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು,
ಪಟ್ಟಣದ ನೆರಳು ಆನಾಥಶ್ರಮದಲ್ಲಿ ವೃದ್ದರಿಗೆ ಹಾಗೂ ಶ್ರೀ ಚನ್ನಬಸವೇಶ್ವರ ಅಂಧಮಕ್ಕಳ ಶಾಲೆಯ ಮಕ್ಕಳಿಗೆ ವಸ್ತçಗಳನ್ನು ವಿತರಿಸಲಾಯಿತು. ಅಂತರ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಯ ವಿದ್ಯಾರ್ಥಿಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ . ಶಿವಚಾರ್ಯ ಹಿರೇಮಠ ಗಿಣಿವಾರ ಶ್ರೀಗಳು ವಹಿಸಿದರು.
ಬಿ.ವಿ.ಆರ್. ಎಜ್ಯುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಪದ್ಮವತಿ ಬಿ.ವಿ.ರೆಡ್ಡಿ, ಸಹಕಾರ್ಯದರ್ಶಿ ಪ್ರವೀಣ್, ಮುಖ್ಯಗುರು ಸರಮತ್ ಖಾನ್, ವಟಗಲ್ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಂಜುನಾಥ ಸ್ವಾಮಿ ವಟಗಲ್, ಮಸ್ಕಿಹೋಲಿಫೆತ್ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ಕೆ.ವಿ.ರೆಡ್ಡಿ,ಸರ್ವೋತ್ತಮ ರೆಡ್ಡಿ, ತುಳಸೆಮ್ಮ, ನರಸಮ್ಮ,ಜಯಮ್ಮ, ಸುಜಾತಮ್ಮ, ಲಕ್ಷಿö್ಮÃದೇವಮ್ಮ, ಸೇರಿದಂತೆ ಶಾಲೆಯ ಶಿಕ್ಷಕರು ,ವಿದ್ಯಾರ್ಥಿಗಳು ,ಪಾಲಕರು ಭಾಗವಹಿಸಿದರು.
ಗದಗ: ಭಾರತೀಯ ಜನತಾ ಯುವ ಮೋರ್ಚಾ ಗದಗ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಪ್ರಜಾಪ್ರಭುತ್ವ, ಅರಾಜಕತೆಯಲ್ಲ’ (Democracy, Not Anarchy)…
ಮಂತ್ರಾಲಯ: ಉತ್ತಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವನ್ನು ಭಕ್ತಿಭಾವ ಮತ್ತು…
ಸಿರವಾರ: "ನಮ್ಮ ಮಕ್ಕಳು ಓದಿನಿಂದ ದೂರವಾದರೆ, ಸಮಾಜ ಮುಂದೆ ಹೋಗಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿಗೆ ಶಿಕ್ಷಣ ಕೊಡಿಸುವುದೇ…
ಮಾನ್ವಿ: ಡಿಸ್ಟ್ರಿಬ್ಯೂಟರ್ 82ರ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ಸುಮಾರು 3 ಸಾವಿರ ಎಕರೆ ಪ್ರದೇಶದಲ್ಲಿ…
ಶಹಾಪುರ: ರೈತರ ಬೆಳೆಗಳು ಒಣಗುತ್ತಿದ್ದರೂ ಶಾಸಕರಿಗೆ ಕಾಳಜಿಯಿಲ್ಲ. ಏಳು ಶಾಸಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕಾಲುವೆಗಳಿಗೆ ನೀರು ಬಿಡುಗಡೆ…
ಮಾನ್ವಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ನೇಗಿಲುಯೋಗಿ ಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ಸುಲಭವಾಗಿ ಮತ್ತು…