ಮಾನ್ವಿ: ಪಟ್ಟಣದ ರಾಯಚೂರು ರಸ್ತೆಯ ಪಕ್ಕದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಪಲ್ಸರ್ 220 ಬೈಕ್ ಆನ್ ಮಾಡುತ್ತಿದ್ದಂತೆ ಏಕಾಏಕಿ ಬೈಕ್ ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಇದರಿಂದ ಹೆಚ್ಚಿನ ಅನಾಹುತ ಸಂಭವಿಸುವುದು ತಪ್ಪಿದೆ ಎಂದು ಅಗ್ನಿಶಾಮಕ ಠಾಣೆಯ ಹಿರಿಯ ಅಧಿಕಾರಿ ರಂಗಪ್ಪ ಮಾಹಿತಿ ನೀಡಿದ್ದಾರೆ.








