ರಾಯಚೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ‘ಪ್ರಜಾಸೇವೆ ಆಂದೋಲನ-2026’ ಕಾರ್ಯಕ್ರಮಕ್ಕೆ ಜಿಲ್ಮಾಲೆಯ ಮಾನ್ವಿ ಪಟ್ಟಣದಲಿ ಶನಿವಾರ ಚಾಲನೆ ನೀಡಲಾಯಿತು.
ಪಟ್ಟಣದ ಭಾಷುಮಿಯ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಕಾರ್ಯಕ್ರಮವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರಜಾಸೇವೆ ಆಂದೋಲನವು ಕೇವಲ ಬೆಂಗಳೂರು ನಗರಕ್ಕೆ ಸೀಮಿತವಾಗದೆ ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಜನರಿಗೆ ಮತ್ತಷ್ಟು ಹತ್ತಿರವಾಗಿಸುವ ಉದ್ದೇಶ ಹೊಂದಿದೆ ಎಂದರು.(ಎಡೆದೊರೆ ನ್ಯೂಸ್)
ಆಡಳಿತ ವ್ಯವಸ್ಥೆ ಜನಸಾಮಾನ್ಯರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಕಷ್ಟ-ಸುಖಗಳಲ್ಲಿ ಆಡಳಿತ ಭಾಗಿಯಾಗಬೇಕು ಎಂಬುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದಿರುವಿಕೆಯ ಹಣೆಪಟ್ಟಿ ಕಳಚುವ ಉದ್ದೇಶದಿಂದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನಾಗಿ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾನ್ವಿ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಲಾಗಿದೆ ಎಂದರು.(Raichur News)
ಪ್ರಜಾಸೇವೆ ಆಂದೋಲನವು ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಪ್ರತಿ ಶನಿವಾರವೂ ನಿರಂತರವಾಗಿ ನಡೆಯಲಿದೆ. ಜಿಲ್ಲಾಧಿಕಾರಿಗಳು, ತಾಲೂಕು ಮಟ್ಟದ ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವನಾಗಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರದಂದು ನಿರ್ದಿಷ್ಟ ತಾಲೂಕುಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದಾಗಿ ಹೇಳಿದರು. ಉಳಿದ ಶನಿವಾರಗಳಲ್ಲಿ ಸ್ಥಳೀಯ ಶಾಸಕರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ ಎಂದರು.
ಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ನೆರವು ನೀಡುತ್ತಿದೆ. ಪಿಂಚಣಿ, ಪಡಿತರ ಚೀಟಿ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳನ್ನು ಜನರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.
ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಆಡಳಿತ ವ್ಯವಸ್ಥೆಯನ್ನು ಸರಳಗೊಳಿಸಿ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಕೇವಲ ಪ್ರಚಾರಕ್ಕೆ ಸೀಮಿತವಾಗದೆ, ಆಡಳಿತ ಯಂತ್ರದ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದರು.
371ಜೆ ಕಲಂ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದ ಯುವಜನರಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆತಿವೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ದಿವಂಗತ ಧರ್ಮಸಿಂಗ್ ಅವರ ಪ್ರಯತ್ನದಿಂದ ಈ ಭಾಗಕ್ಕೆ 371ಜೆ ಸೌಲಭ್ಯ ದೊರೆತಿದೆ ಎಂದು ಬೋಸರಾಜು ಹೇಳಿದರು.
ಮಾನ್ವಿ ಶಾಸಕ ಹಂಪಯ್ಯ ನಾಯಕ ಮಾತನಾಡಿ, ಕ್ಷೇತ್ರದಲ್ಲಿ ಬರದ ಛಾಯೆ ಆವರಿಸಿದ್ದು, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬಿತ್ತನೆ ಮಾಡಿದ ಬೆಳೆಗಳು ನೀರಿನ ಕೊರತೆಯಿಂದ ಬಾಡುತ್ತಿವೆ. ಆದ್ದರಿಂದ ಎರಡನೇ ಪಟ್ಟಿಯಲ್ಲಿ ಮಾನ್ವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಜನರು ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರುವುದರಿಂದ ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೊನೆಯ ಭಾಗದ ರೈತರಿಗೆ ನೀರು ಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಇತ್ತೀಚೆಗೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದಾರೆ. ರೈತರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಬೋಸರಾಜು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾನ್ವಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಫೂರ್ ಸಾಬ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಕೆ. ಅಮರೇಶ, ಮುಖ್ಯಮಂತ್ರಿ ಕಾರ್ಯದರ್ಶಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್. ನಕುಲ್, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಮಾನ್ವಿ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ಉಪಸ್ಥಿತರಿದ್ದರು.
ಕೊಪ್ಪಳದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾದಕ ವ್ಯಸನ ನಿರ್ಮೂಲನೆ, ಯುವಜನರಲ್ಲಿ ಜಾಗೃತಿ ಮತ್ತು ಅಕ್ರಮ…
ರಾಯಚೂರು: ರಾಯಚೂರು ನ್ಯಾಯವಾದಿಗಳ ಸಂಘ ಹಾಗೂ ನ್ಯಾಯಾಂಗ ಇಲಾಖೆಯ ವತಿಯಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.…
ರಾಯಚೂರು: ಜಿಲ್ಲೆಯ ಲಿಂಗಸುಗೂರು ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿ ಕೈಗೊಂಡಿರುವ…
ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ…
ರಾಯಚೂರು: ಸ್ವಚ್ಛತೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಬೇಕು. ಸುತ್ತಲಿನ ಪರಿಸರ ಶುಚಿತ್ವದಿಂದ ಕೂಡಿದ್ದರೆ ಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ…
ಕನ್ನಡ ಮತ್ತು ಹಿಂದಿ ಎರಡೂ ಭಾಷೆಗಳಲ್ಲಿ ಛಂದೋಬದ್ಧ ಪದ್ಯಗಳನ್ನು ರಚಿಸಿದ ಶಬ್ದ ಗಾರುಡಿಗ ಗುರುಶ್ರೀ ವಿ.ಎಸ್. ಕಾಂತನವರ ಅವರ ಸಾಹಿತ್ಯ…