ರಾಯಚೂರು

ಮಾನ್ವಿಯಲ್ಲಿ ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ ಆಚರಣೆ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಆದರ್ಶ ಪುರುಷ ಶ್ರೀರಾಮನನ್ನು ಪರಿಚಯಿಸಿದ್ದಾರೆ. ಅವರು ರಚಿಸಿದ ರಾಮಾಯಣದ ಮೂಲಕ ಮನುಷ್ಯ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಹೇಗೆ ಬದುಕಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಅಲ್ಲದೆ, ರಾಮರಾಜ್ಯದ ಪರಿಕಲ್ಪನೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿ ಆಚರಣೆ: ವಾಲ್ಮೀಕಿ ಜೀವನ ಚರಿತ್ರೆಯಿಂದ ಯುವಕರು ಸ್ಫೂರ್ತಿ ಪಡೆಯಲಿ- ಎಸ್ಪಿ ಅರುಣಾಂಗ್ಷು ಗಿರಿ

ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ತಾಲೂಕು ಮಟ್ಟದ ವಾಲ್ಮೀಕಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್, ಪೊಲೀಸ್ ಇನ್ಸ್‌ಪೆಕ್ಟರ್ ಸೋಮಶೇಖರ್, ಎಸ್. ಕೆಂಚರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ್ ದೇವಮಾನೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಭಾಗಯ್ಯನಾಯಕ, ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

projectededore

Recent Posts

ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ಮಣ್ಣಿನ ಸ್ನಾನದ ಶಿಬಿರ

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…

6 hours ago

ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…

1 day ago

ಮಂತ್ರಾಲಯದಲ್ಲಿ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…

1 day ago

ಆಗುಂಬೆ ಬಳಿ ಭೀಕರ ಅಪಘಾತ: ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ ಸ್ಥಳದಲ್ಲೇ ದುರ್ಮರಣ

ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…

1 day ago

ವಿಶೇಷ ವರದಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಕನ್ನಡಕ್ಕೇ ಅಪಮಾನ! ಎಐ ಸೃಷ್ಟಿಸಿದ ಶುಭಾಶಯ ಪೋಸ್ಟರ್‌ಗಳಲ್ಲಿ ಅಕ್ಷರಗಳ ಅಪಭ್ರಂಶ; ಕನ್ನಡಾಭಿಮಾನವೋ, ಕೇವಲ ಪ್ರದರ್ಶನವೋ?

ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…

2 days ago

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ. ಅಜಯ್ ಸಿಂಗ್

ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…

2 days ago