ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಬಹುದಿನಗಳಿಂದ ಗ್ರಾಮಸ್ಥರ ಅಗತ್ಯವಾಗಿದ್ದ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಮಟಮಾರಿ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳೊಂದಿಗೆ ಉತ್ತಮ ಸಂಪರ್ಕ ಕಲ್ಪಿಸುವಂತಾಗಲಿದೆ. ಇದರಿಂದ ಗ್ರಾಮಸ್ಥರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ವಿದ್ಯಾರ್ಥಿಗಳು, ರೈತರು ಹಾಗೂ ವ್ಯಾಪಾರಸ್ಥರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ರಸ್ತೆ ನಿರ್ಮಾಣದಿಂದ ಗ್ರಾಮದ ಸಂಪರ್ಕ ವ್ಯವಸ್ಥೆ ಮತ್ತಷ್ಟು ಬಲಗೊಳ್ಳುವುದರೊಂದಿಗೆ ಮಟಮಾರಿ ಗ್ರಾಮದ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ.
ಇದೇ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಕುರ್ಡಿ ಗ್ರಾಮದಲ್ಲಿ KKRDB ಅನುದಾನದಡಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಉದ್ಘಾಟಿಸಲಾಯಿತು. ಗುರುಜೀಗಳಾದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ತಾತನವರು, ಬಿಚ್ಚಾಲಿ ಅವರ ಆಶೀರ್ವಾದ ಪಡೆಯಲಾಯಿತು.
ಸಮುದಾಯ ಭವನವು ಗ್ರಾಮದಲ್ಲಿ ನಡೆಯುವ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಯುವ ಮಿತ್ರರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಜನರ ಅಗತ್ಯಗಳಿಗೆ ಸ್ಪಂದಿಸಿ, ಗ್ರಾಮೀಣ ಭಾಗದಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಸುಗಮ ಸಂಪರ್ಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ ಎಂದು ತಿಳಿಸಲಾಯಿತು.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…
ಸಿರವಾರ: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯ (ಕೆಎಎಸ್‌ಎಸ್) ಪೂರ್ಣ ಪ್ರಯೋಜನ ಪಡೆಯಲು ಪ್ರತಿಯೊಬ್ಬ ಸರ್ಕಾರಿ…