ರಾಯಚೂರು

ಪೋತ್ನಾಳ್ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಾಮೂಹಿಕ ಶೌಚಾಲಯಕ್ಕೆ ತಹಶೀಲ್ದಾರ್ ರಿಂದ ಸ್ಥಳ ಪರಿಶೀಲನೆ


ಮಾನ್ವಿ: ತಾಲ್ಲೂಕಿನ ಪೋತ್ನಾಳ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿ ಕೊಂಡ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಗ್ರಾಮದ ಸಮಾಜಿಕ ಕಾರ್ಯಕರ್ತರಾದ ಶರಣಕುಮಾರ ಮುದ್ದಂಗುಡ್ಡಿ ರವರು ಪೋತ್ನಾಳ್ ಗ್ರಾಮ ಸುತ್ತಮುತ್ತಲಿನ 48 ಗ್ರಾಮಗಳ ಜನರಿಗೂ ಕೇಂದ್ರ ಸ್ಥಾನವಾಗಿರುವುದರಿಂದ ಪ್ರತಿನಿತ್ಯ ಸಾವಿರಾರು ಜನರು ಪೋತ್ನಾಳ್‌ಗೆ ಆಗಮಿಸುವುದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತವಾದ ಬಸ್ ನಿಲ್ದಾಣ ಹಾಗೂ ಸಾರ್ವಜನಿಕರಿಗಾಗಿ ಸಾಮೂಹಿಕ ಶೌಚಾಲಯ ,ಕುಡಿಯುವ ನೀರಿಗಾಗಿ ಕೆರೆಯನ್ನು ನಿರ್ಮಾಣ ಮಾಡುವಂತೆ ಮನವಿ ಮಾಡಿಕೊಂಡ ಹಿನ್ನೇಲೆಯಲ್ಲಿ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರವರು ಪೋತ್ನಾಳ್ ಗ್ರಾಮದ ಬಸ್ ನಿಲ್ದಾಣದ ಸಮೀಪ ಇರುವ ಖಾಲಿ ಜಾಗವನ್ನು ಪರಿಶೀಲಿಸಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡುವ ಕುರಿತು ಪರಿಶೀಲನೆ ನಡೆಸಿದರು. ಇನ್ನೂಳಿದ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಬರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅಕ್ತರ್ ಪಾಷಾ. ಸೇರಿದಂತೆ ಇನ್ನಿತರರು ಇದ್ದರು.

projectededore

Recent Posts

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ-ಎಸ್ಡಿಎಂಸಿ ಅಧ್ಯಕ್ಷ ಮಾನಶಯ್ಯ ಪೂಜಾರಿ

ಅರಕೇರಾ : ಮಕ್ಕಳಲ್ಲಿನ ಸುಪ್ತ ಪ್ರತಿಭೆ ಹಾಗೂ ಸೃಜನಶೀಲ ಸಾಮರ್ಥ್ಯವನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಎಸ್ಡಿಎಂಸಿ…

5 hours ago

ಮಾನ್ವಿ: ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ – ಶಾಸಕ ಹಂಪಯ್ಯ ನಾಯಕ ಸೂಚನೆ

ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಕುಡಿಯುವ…

22 hours ago

ಬಸವೇಶ್ವರರ ಕುರಿತು ಆಕ್ಷೇಪಾರ್ಹ ಲೇಖನ, ವಿಡಿಯೋ: ಮಾನ್ವಿಯಲ್ಲಿ ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

ಮಾನ್ವಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಕುರಿತು ಆಕ್ಷೇಪಾರ್ಹ ಲೇಖನ ಮತ್ತು ವಿಡಿಯೋ ಪ್ರಸಾರ ಮಾಡಿರುವುದನ್ನು ಖಂಡಿಸಿ ಪಟ್ಟಣದ…

22 hours ago

ಕುಡಿಯುವ ನೀರಿಗಾಗಿ ಪರದಾಟ: ಏಪ್ರಿಲ್‌ನಲ್ಲಿ ಮನವಿ ಸಲ್ಲಿಸಿದರೂ ಕ್ಯಾರೆ ಎನ್ನದ ಅಧಿಕಾರಿಗಳು

​ ಸಮಸ್ಯೆ ಬಗೆಹರಿಸಲು ವಾರ್ಡ್ ನಂ. 03ರ ನಿವಾಸಿಗಳ ಆಗ್ರಹ ​ಸಿರವಾರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ. 03ರ…

22 hours ago

ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ – 38 ಬಾಟಲಿ ವಶ, ಆರೋಪಿ ಬಂಧನ

ರಾಯಚೂರು: ಮಾನವ ಜೀವಕ್ಕೆ ಅಪಾಯಕಾರಿಯಾದ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನೇತಾಜಿ ನಗರ ಠಾಣೆ ಪೊಲೀಸರು…

22 hours ago

ಕಾರ್ತಿಕ ಪೂರ್ಣಿಮೆ: ನ.24ರಂದು ಮಂತ್ರಾಲಯದಲ್ಲಿ ತುಂಗಾರತಿ, ಲಕ್ಷದೀಪೋತ್ಸವ

ಮಂತ್ರಾಲಯ: ಕಾರ್ತಿಕ ಪೂರ್ಣಿಮೆಯ ಅಂಗವಾಗಿ ನವೆಂಬರ್ 24ರಂದು ಸಂಜೆ 6 ಗಂಟೆಗೆ ಮಂತ್ರಾಲಯದ ಪವಿತ್ರ ತುಂಗಭದ್ರಾ ನದಿ ತೀರದಲ್ಲಿ 'ತುಂಗಾರತಿ–ಪುಣ್ಯನದಿ…

1 day ago