ರಾಯಚೂರು: ನಗರದ ಪ್ರತಿಷ್ಠಿತ ವಿಜಿಕೆ (VGK) ಹೃದ್ರೋಗ ಆಸ್ಪತ್ರೆಗೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ ನೀಡಿ, ಖ್ಯಾತ ವೈದ್ಯರಾದ ಡಾ. ವಿ.ಜಿ. ಕುಲಕರ್ಣಿ ಹಾಗೂ ಹೃದ್ರೋಗ ತಜ್ಞ ಡಾ. ಅಜಿತ್ ಕುಲಕರ್ಣಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಕಳೆದ ಮಾರ್ಚ್ ತಿಂಗಳಲ್ಲಿ ತಮಗೆ ಹೃದಯ ಸಂಬಂಧಿ ತೊಂದರೆ ಉಂಟಾದ ಸಂದರ್ಭದಲ್ಲಿ ಡಾ. ಅಜಿತ್ ಕುಲಕರ್ಣಿ ಅವರು ಚಿಕಿತ್ಸೆ ನೀಡಿದ್ದನ್ನು ಸ್ವಾಮೀಜಿ ಸ್ಮರಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂತಹ ಉತ್ತಮ ಆಸ್ಪತ್ರೆ ಹಾಗೂ ನುರಿತ ಹೃದ್ರೋಗ ತಜ್ಞರು ಲಭ್ಯವಿರುವುದು ಈ ಭಾಗದ ಜನರ ಸೌಭಾಗ್ಯ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹೃದ್ರೋಗ ತಜ್ಞರಾದ ಡಾ. ಸಗರದ, ಡಾ. ಬಸನಗೌಡ ಪಾಟೀಲ್ ಹಾಗೂ ಡಾ. ಬಿ.ಎಂ. ಪಾಟೀಲ್ ಸೇರಿದಂತೆ ಆಸ್ಪತ್ರೆಯ ವೈದ್ಯರು ಈ ಹಿಂದೆ ತಮಗೆ ಚಿಕಿತ್ಸೆ ನೀಡಿದ್ದನ್ನು ನೆನಪಿಸಿಕೊಂಡರು.
ಈ ಆಸ್ಪತ್ರೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಇನ್ನಷ್ಟು ಉತ್ತಮ ವೈದ್ಯಕೀಯ ಸೇವೆ ದೊರೆಯಲಿ. ಶ್ರೀ ಮಹರ್ಷಿ ವಾಲ್ಮೀಕಿ ಗುರುಗಳ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸ್ವಾಮೀಜಿ ಹಾರೈಸಿದರು.
ಈ ಸಂದರ್ಭದಲ್ಲಿ ಡಾ. ಶಾರದಾ ಹುಲಿನಾಯಕ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಪ್ರಭು ಹುಲಿನಾಯಕ, ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ಅಮೃತ್ ನಾಯಕ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯದರ್ಶಿನಿ ನಾಯಕ ಹಾಗೂ ನಿವೃತ್ತ ತಹಸೀಲ್ದಾರ್ ಲಕ್ಷ್ಮಯ್ಯ ಉಪಸ್ಥಿತರಿದ್ದರು.








