ರಾಯಚೂರು: ರಾಯಚೂರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ನವಚೇತನ ಶಾಲೆ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2026–27ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗಿಲ್ಲೇಸೂಗೂರು, ಚಂದ್ರಬಂಡ ರಸ್ತೆ, ಆಶ್ರಯ ಕಾಲೋನಿ, ರಾಯಚೂರಿನ ಎಂಟನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷಾ ಮೇಟಿಗೌಡ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿನಿ ಪ್ರತಿಕ್ಷಾ ಮೇಟಿಗೌಡ ಅವರ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಹನುಮೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ವೀಣಾ ಎನ್ ಜೆ ಹಾಗೂ ವಸತಿ ನಿಲಯದ ನಿಲಯ ಪಾಲಕರಾದ ವಿಶ್ವನಾಥ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಡುಗೆ ಸಹಾಯಕರು ವಿದ್ಯಾರ್ಥಿನಿ ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಅಭಿನಂದನೆ ತಿಳಿಸಿ ಶುಭ ಹಾರೈಸಿದ್ದಾರೆ.








