ಬೆಂಗಳೂರು: ಕರ್ನಾಟಕವನ್ನು ಭಾರತದ ಕ್ವಾಂಟಮ್ ತಂತ್ರಜ್ಞಾನ ರಾಜಧಾನಿಯನ್ನಾಗಿ ರೂಪಿಸುವ ಗುರಿಯೊಂದಿಗೆ ಪ್ರಸ್ತಾವಿತ ಕ್ವಾಂಟಮ್ ಸಿಟಿಯನ್ನು ವಿಸ್ತರಿಸಲು ಹೆಚ್ಚುವರಿ ಜಾಗ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿರುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.
ಬೆಂಗಳೂರು ಟೆಕ್ ಸಮ್ಮಿಟ್-2026ರ ಅಂಗವಾಗಿ ಆಯೋಜಿಸಿದ್ದ ‘Karnataka Quantum City: Building a Global Quantum Innovation and Research Hub’ ದುಂಡುಮೇಜಿನ ಸಭೆಯಲ್ಲಿ ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳು, ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ಕಂಪನಿಗಳು, ಸಂಶೋಧನಾ ಸಂಸ್ಥೆಗಳು, ಕ್ವಾಂಟಮ್ ಟಾಸ್ಕ್‌ಫೋರ್ಸ್ ಸದಸ್ಯರು ಹಾಗೂ ಹೂಡಿಕೆ ವಲಯದ ಪ್ರತಿನಿಧಿಗಳೊಂದಿಗೆ ಸಚಿವರು ಸಂವಾದ ನಡೆಸಿದರು.
ಸಭೆಯಲ್ಲಿ ಕ್ವಾಂಟಮ್ ಸಿಟಿಯ ಪರಿಕಲ್ಪನೆ, ಮೂಲಸೌಕರ್ಯ, ಅನುಷ್ಠಾನ ಯೋಜನೆ ಹಾಗೂ ಕರ್ನಾಟಕದಲ್ಲಿರುವ ಸಂಶೋಧನಾ ಮತ್ತು ಮಾನವ ಸಂಪನ್ಮೂಲ ಸಾಮರ್ಥ್ಯದ ಕುರಿತು ವಿವರಿಸಿದ ಸಚಿವರು, ಹೂಡಿಕೆ, ಸಂಶೋಧನೆ, ತಂತ್ರಜ್ಞಾನ ಅಭಿವೃದ್ಧಿ ಮತ್ತು ಜಾಗತಿಕ ಸಹಭಾಗಿತ್ವದ ಮೂಲಕ ಕ್ವಾಂಟಮ್ ಸಿಟಿಯ ಅಭಿವೃದ್ಧಿಯಲ್ಲಿ ಪಾಲುದಾರರಾಗುವಂತೆ ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಆಹ್ವಾನ ನೀಡಿದರು.
ಬೆಂಗಳೂರು ಈಗಾಗಲೇ ದೇಶದ ಪ್ರಮುಖ ಕ್ವಾಂಟಮ್ ತಂತ್ರಜ್ಞಾನ ಕ್ಲಸ್ಟರ್‌ಗಳಲ್ಲೊಂದಾಗಿ ಹೊರಹೊಮ್ಮಿದೆ. ಐಐಎಸ್‌ಸಿ ಸೇರಿದಂತೆ ವಿಶ್ವಮಟ್ಟದ ಸಂಶೋಧನಾ ಸಂಸ್ಥೆಗಳು, ಪರಿಣತ ಮಾನವ ಸಂಪನ್ಮೂಲ, ತಂತ್ರಜ್ಞಾನ ಕಂಪನಿಗಳು ಮತ್ತು ಸ್ಟಾರ್ಟ್‌ಅಪ್‌ಗಳ ಪರಿಸರ ವ್ಯವಸ್ಥೆ ಕರ್ನಾಟಕದ ದೊಡ್ಡ ಶಕ್ತಿಯಾಗಿದೆ. ಈ ಸಾಮರ್ಥ್ಯವನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವುದು ಸರ್ಕಾರದ ಗುರಿಯಾಗಿದೆ ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.
ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರಿನ ಹೆಸರಘಟ್ಟದಲ್ಲಿ 6.14 ಎಕರೆ ಜಾಗವನ್ನು ಕ್ವಾಂಟಮ್ ಸಿಟಿಗಾಗಿ ಮಂಜೂರು ಮಾಡಿದ್ದು, ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ₹1,000 ಕೋಟಿ ಹೂಡಿಕೆಯ ಬದ್ಧತೆಯನ್ನು ಘೋಷಿಸಿದೆ. ಸಂಶೋಧನೆ, ಸ್ಟಾರ್ಟ್‌ಅಪ್‌ಗಳು, ಕೈಗಾರಿಕೆ, ಹೂಡಿಕೆ ಮತ್ತು ಜಾಗತಿಕ ಪಾಲುದಾರಿಕೆಗೆ ಅಗತ್ಯವಿರುವ ಸಮಗ್ರ ಮೂಲಸೌಕರ್ಯವನ್ನು ಇಲ್ಲಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ.
ಹೆಚ್ಚುವರಿ ಜಾಗಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ
ಈಗಾಗಲೇ ಹಲವು ಪ್ರಮುಖ ಕಂಪನಿಗಳು ಹಾಗೂ ವಿದೇಶಿ ಸಂಶೋಧನಾ ಮತ್ತು ಶೈಕ್ಷಣಿಕ ಸಂಸ್ಥೆಗಳು ಕ್ವಾಂಟಮ್ ಸಿಟಿಯೊಂದಿಗೆ ಸಹಭಾಗಿತ್ವಕ್ಕೆ ಆಸಕ್ತಿ ತೋರಿಸಿವೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ವಿಸ್ತರಿಸಲು ಹೆಚ್ಚುವರಿ ಜಾಗದ ಅವಶ್ಯಕತೆ ಇದೆ ಎಂದು ಸಚಿವರು ತಿಳಿಸಿದರು.
ಕ್ವಾಂಟಮ್ ಸಿಟಿಗೆ ಇನ್ನಷ್ಟು ವಿಸ್ತೃತ ಮೂಲಸೌಕರ್ಯ ನಿರ್ಮಿಸಲು ಹೆಚ್ಚುವರಿ ಜಾಗ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಾಗತಿಕ ಮಟ್ಟದ ಕ್ವಾಂಟಮ್ ಪರಿಸರ ವ್ಯವಸ್ಥೆ ನಿರ್ಮಿಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಡಾ. ಅಜಯ್ ಧರ್ಮಸಿಂಗ್ ತಿಳಿಸಿದರು.
ಕ್ವಾಂಟಮ್ ಸಿಟಿಯನ್ನು ಕೇವಲ ಕಟ್ಟಡ ಅಥವಾ ಮೂಲಸೌಕರ್ಯ ಯೋಜನೆಯಾಗಿ ರೂಪಿಸದೆ, ಸಂಶೋಧನಾ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು, ಕೈಗಾರಿಕೆಗಳು, ಹೂಡಿಕೆದಾರರು, ಪ್ರತಿಭಾವಂತ ಮಾನವ ಸಂಪನ್ಮೂಲ ಹಾಗೂ ಜಾಗತಿಕ ತಂತ್ರಜ್ಞಾನ ಪಾಲುದಾರರನ್ನು ಸಂಪರ್ಕಿಸುವ ಸಮಗ್ರ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಕ್ವಾಂಟಮ್ ಕ್ಷೇತ್ರದಲ್ಲಿ ಸಂಶೋಧನೆಯಿಂದ ಉತ್ಪನ್ನ ಅಭಿವೃದ್ಧಿಗೆ, ಉತ್ಪನ್ನದಿಂದ ವಾಣಿಜ್ಯೀಕರಣಕ್ಕೆ ಹಾಗೂ ವಾಣಿಜ್ಯೀಕರಣದಿಂದ ಜಾಗತಿಕ ಮಾರುಕಟ್ಟೆಗೆ ಸಾಗುವ ಸಂಪೂರ್ಣ ವ್ಯವಸ್ಥೆಯನ್ನು ಕರ್ನಾಟಕದಲ್ಲೇ ನಿರ್ಮಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
ದುಂಡುಮೇಜಿನ ಸಭೆಯಲ್ಲಿ ಜರ್ಮನಿಯ ಕಾನ್ಸುಲ್ ಜನರಲ್ ಡಾ. ಕ್ರಿಸ್ಟೋಫ್ ಡೋರ್ಷ್‌ಫೆಲ್ಟ್, ಡೆಪ್ಯುಟಿ ಕಾನ್ಸುಲ್ ಜನರಲ್ ಆನೆಟ್ ಬೇಸ್ಲರ್, ಇಟಲಿ ಕಾನ್ಸುಲೇಟ್ ಜನರಲ್‌ನ ಪ್ರೊ. ಮಾರ್ಕೊ ರೆ, JNCASR ಅಧ್ಯಕ್ಷ ಪ್ರೊ. ನಾರಾಯಣ ಕೆ.ಎಸ್., IIIT ಧಾರವಾಡ ನಿರ್ದೇಶಕ ಪ್ರೊ. ಎಸ್.ಆರ್. ಮಹದೇವ ಪ್ರಸನ್ನ, ಮಾಜಿ DRDO ನಿರ್ದೇಶಕ ಕೆ.ಡಿ. ನಾಯಕ್, QETCI ಸ್ಥಾಪಕಿ ಮತ್ತು CEO ರೀನಾ ದಯಾಳ್, USIBC ಸ್ಟ್ರಾಟೆಜಿಕ್ ಟೆಕ್ನಾಲಜೀಸ್ ನಿರ್ದೇಶಕ ಡಾ. ಸುಮೀರ್, Israel Innovation Authority ಹಾಗೂ U.S. Chamber of Commerce ಪ್ರತಿನಿಧಿಗಳು, QNu Labsನ ಸುನಿಲ್ ಗುಪ್ತಾ ಸೇರಿದಂತೆ ಕ್ವಾಂಟಮ್ ಟಾಸ್ಕ್‌ಫೋರ್ಸ್ ಸದಸ್ಯರು, QPIAI, Amazon Web Services, Seafund ಮತ್ತು IISc ಸೇರಿದಂತೆ ವಿವಿಧ ಸಂಶೋಧನಾ, ಕೈಗಾರಿಕಾ ಹಾಗೂ ಹೂಡಿಕೆ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಗದಗ: ಭಾರತೀಯ ಜನತಾ ಯುವ ಮೋರ್ಚಾ ಗದಗ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಪ್ರಜಾಪ್ರಭುತ್ವ, ಅರಾಜಕತೆಯಲ್ಲ’ (Democracy, Not Anarchy)…
ಮಂತ್ರಾಲಯ: ಉತ್ತಾನ ದ್ವಾದಶಿಯ ಪವಿತ್ರ ಸಂದರ್ಭದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತುಳಸಿ–ದಾಮೋದರ ವಿವಾಹ ಮಹೋತ್ಸವವನ್ನು ಭಕ್ತಿಭಾವ ಮತ್ತು…
ಸಿರವಾರ: "ನಮ್ಮ ಮಕ್ಕಳು ಓದಿನಿಂದ ದೂರವಾದರೆ, ಸಮಾಜ ಮುಂದೆ ಹೋಗಲು ಸಾಧ್ಯವಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಗುವಿಗೆ ಶಿಕ್ಷಣ ಕೊಡಿಸುವುದೇ…
ಮಾನ್ವಿ: ಡಿಸ್ಟ್ರಿಬ್ಯೂಟರ್ 82ರ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ಸುಮಾರು 3 ಸಾವಿರ ಎಕರೆ ಪ್ರದೇಶದಲ್ಲಿ…
ಶಹಾಪುರ: ರೈತರ ಬೆಳೆಗಳು ಒಣಗುತ್ತಿದ್ದರೂ ಶಾಸಕರಿಗೆ ಕಾಳಜಿಯಿಲ್ಲ. ಏಳು ಶಾಸಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕಾಲುವೆಗಳಿಗೆ ನೀರು ಬಿಡುಗಡೆ…
ಮಾನ್ವಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ನೇಗಿಲುಯೋಗಿ ಯೋಜನೆಯಡಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ಸುಲಭವಾಗಿ ಮತ್ತು…