ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಭಾನುವಾರ ಸಂಜೆ ಸುಮಾರು 4.30ರ ವೇಳೆಗೆ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬೀದಿ ನಾಯಿ ದಾಳಿ ನಡೆಸಿದೆ. ದಾಳಿಯಿಂದ ಬಾಲಕನ ಬಲಗೈಗೆ ತೀವ್ರ ಗಾಯಗಳಾಗಿವೆ.
ನಾಯಿ ದಾಳಿ ಮಾಡುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ಆತಂಕ ಉಂಟು ಮಾಡುವಂತಿದೆ.
ಗಾಯಗೊಂಡ ಬಾಲಕನನ್ನು ತಕ್ಷಣವೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಿಂದ ಬಾಲಕನ ಕುಟುಂಬಸ್ಥರು ಆತಂಕಗೊಂಡಿದ್ದು, ನಗರದ ವಿವಿಧೆಡೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.








