ರಾಯಚೂರು

ನ.1ರಂದು ಕರವೇಯಿಂದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ; ಸಾಧಕರಿಗೆ ಸನ್ಮಾನ : ವಿನೋದ್ ರೆಡ್ಡಿ

ರಾಯಚೂರು: ಕನ್ನಡ ಭಾಷೆ, ಸಂಸ್ಕೃತಿ, ನಾಡು-ನುಡಿ ಹಾಗೂ ನೆಲ-ಜಲದ ಸಂರಕ್ಷಣೆಯ ಆಶಯದೊಂದಿಗೆ 71ನೇ ಕರ್ನಾಟಕ ರಾಜ್ಯೋತ್ಸವವನ್ನು ನವೆಂಬರ್ 1ರಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಯಚೂರು ಜಿಲ್ಲಾ ಕಚೇರಿಯಲ್ಲಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ವಿನೋದ ರೆಡ್ಡಿ ಎಂ. ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ವಿವಿಧ ಮಠಗಳ ಮಠಾಧೀಶರು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮಟ್ಟದ ಎಡೆದೊರೆ ರತ್ನ ಪ್ರಶಸ್ತಿ ಪುರಸ್ಕೃತ ಹಾಗೂ ಕಲಬುರಗಿ ಪೀಠದ ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ಬಿ. ವೆಂಕಟಸಿಂಗ್, ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ, ಕರವೇ ಕಾನೂನು ಸಲಹೆಗಾರರು ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್. ಶಿವಶಂಕರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ಕ್ರೀಡಾ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇದೇ ದಿನ ಸಂಜೆ 6 ಗಂಟೆಗೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಮಿಸ್ಟರ್ ಕರ್ನಾಟಕ ರತ್ನ’ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ. ಕರವೇ ದೇಹದಾರ್ಢ್ಯ ಘಟಕದ ನಗರ ಅಧ್ಯಕ್ಷ ರಿಷಬ್ ವಸಿಷ್ಠ ಅಧ್ಯಕ್ಷತೆ ವಹಿಸಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು.

ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಕನ್ನಡಿಗರ ಹಕ್ಕುಗಳ ರಕ್ಷಣೆ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ನಿರಂತರವಾಗಿ ಹೋರಾಡುತ್ತಿದೆ. ಕನ್ನಡದ ಅಸ್ಮಿತೆಗೆ ಧಕ್ಕೆಯಾದ ಸಂದರ್ಭದಲ್ಲಿ ಸಂಘಟನೆ ಹೋರಾಟಕ್ಕೆ ಮುಂದಾಗಲಿದೆ ಎಂದು ವಿನೋದ ರೆಡ್ಡಿ ತಿಳಿಸಿದ್ದಾರೆ.

ಇದರೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆಗಳು, ಕನ್ನಡಿಗರ ಹಕ್ಕುಗಳು ಹಾಗೂ ಪ್ರಾದೇಶಿಕ ಅಭಿವೃದ್ಧಿಯ ಕುರಿತು ಚರ್ಚಿಸಲು ನವೆಂಬರ್ 30ರಂದು ಗಡಿನಾಡು ಕನ್ನಡಿಗರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯೋತ್ಸವದ ಎಲ್ಲ ಕಾರ್ಯಕ್ರಮಗಳಲ್ಲಿ ಕರವೇ ಪದಾಧಿಕಾರಿಗಳು, ಕಾರ್ಯಕರ್ತರು, ಕನ್ನಡಪರ ಸಂಘಟನೆಗಳ ಮುಖಂಡರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

projectededore

Recent Posts

ಗ್ರಾಮೀಣ ಜನರಿಗೆ ನಿರಂತರ ಆರೋಗ್ಯ ಸೇವೆ: ಭವಿಷ್ಯ ಭಾರತ್, VST ಸಂಜೀವನಿ ಕಾರ್ಯ ಶ್ಲಾಘನೆ

ರಾಯಚೂರು: ತಾಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ಭವಿಷ್ಯ ಭಾರತ್ ಸಂಸ್ಥೆ ಹಾಗೂ VST ಸಂಜೀವನಿ ವತಿಯಿಂದ ನ.3ರಂದು VST ಫೌಂಡೇಶನ್ ಡೇ-2026…

2 hours ago

ಪುರಸಭೆಯ ಕುಡಿಯುವ ನೀರಿನ ಕೆರೆ ತುಂಬಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್.ಬೋಸರಾಜು

ಮಾನ್ವಿ : ತಾಲೂಕಿನ ರಬ್ಬಣಕಲ್ ಗ್ರಾಮದ ಬಳಿಯಲ್ಲಿನ ಪುರಸಭೆಯ ಕುಡಿಯುವ ನೀರಿನ ಕೆರೆಗೆ ವಿಧಾನ ಪರಿಷತ್ ಸದಸ್ಯ ಎನ್. ಎಸ್…

4 hours ago

ಆರ್ಯವೈಶ್ಯ ಸಂಘದಿAದ ಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ 2 ಲಕ್ಷ ರೂಗಳ ಸಹಾಯದಾನ

ಮಾನ್ವಿ: ಮಾನ್ವಿ ತಾಲೂಕು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ವತಿಯಿಂದ ರಾಯಚೂರಿನಲ್ಲಿ ಇತ್ತಿಚಿಗೆ ದುಷ್ಕರ್ಮಿಯಿಂದ ಕೊಲೆಗೆ ಒಳಗಾದ ಆರ್ಯವೈಶ್ಯ ಸಮುದಾಯದ…

5 hours ago

ಕೃಷ್ಣಾ–ತುಂಗಭದ್ರಾ ನದಿಗಳಿದ್ದರೂ ರೈತರಿಗೆ ನೀರಿನ ಕೊರತೆ ಬೆಳೆ ಉಳಿಸಲು ತಕ್ಷಣ ನೀರು ಬಿಡುಗಡೆಗೆ ಕೆ. ಶಿವನಗೌಡ ನಾಯಕ ಆಗ್ರಹ

ರಾಯಚೂರು: ಕೃಷ್ಣಾ ಮತ್ತು ತುಂಗಭದ್ರಾ ನದಿಗಳು ಜಿಲ್ಲೆಯ ಮೂಲಕವೇ ಹರಿಯುತ್ತಿದ್ದರೂ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ದೊರೆಯದೆ ಸಂಕಷ್ಟ ಎದುರಿಸುವಂತಾಗಿದೆ.…

6 hours ago

ಸಿರವಾರ: ಟ್ಯಾಕ್ಸಿ ಕಾರು ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಪರದಾಟ – ತಹಶೀಲ್ದಾರರಿಗೆ ಮನವಿ

ಸಿರವಾರ: ಪಟ್ಟಣದಲ್ಲಿ ಟ್ಯಾಕ್ಸಿ ಕಾರುಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಒತ್ತಾಯಿಸಿ ಸಿರವಾರದ ಟ್ಯಾಕ್ಸಿ ಚಾಲಕರ ಒಕ್ಕೂಟದ ವತಿಯಿಂದ ತಹಶೀಲ್ದಾರರಿಗೆ ಮನವಿ…

7 hours ago

​ರಕ್ತದಾನ ಅತ್ಯಂತ ಶ್ರೇಷ್ಠವಾದುದು, ಯುವಜನತೆಯ ಮಾನವೀಯ ಕಾರ್ಯ ಅಭಿನಂದನೀಯ: ನಟರಾಜ್ ಗೌಡ ಪೊಲೀಸ್ ಪಾಟೀಲ್

​ಸಿರವಾರ: "ಆಪತ್ತಿನಲ್ಲಿರುವ ಮತ್ತೊಬ್ಬ ವ್ಯಕ್ತಿಯ ಪ್ರಾಣ ಉಳಿಸುವ ರಕ್ತದಾನವು ಜಗತ್ತಿನ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ಕೊಡುಗೆಯಾಗಿದೆ. ಇಂದಿನ ದಿನಗಳಲ್ಲಿ…

7 hours ago