ರಾಯಚೂರು

ರಾಯಚೂರು ಕರ್ನಾಟಕ ರಾಜ್ಯೋತ್ಸವ: ರಾಜ್ಯೋತ್ಸವ ಸಭೆಗೆ ಅಧಿಕಾರಿಗಳು ಕಡ್ಡಾಯ ಹಾಜರಾಗಲಿ: ವಿನೋದ ರೆಡ್ಡಿ

ರಾಯಚೂರು: ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಗೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಗೈರುಹಾಜರಾಗುವ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವಿನೋದ ರೆಡ್ಡಿ ಎಂ. ಆಗ್ರಹಿಸಿದ್ದಾರೆ. ರಾಯಚೂರು ಕರ್ನಾಟಕ ರಾಜ್ಯೋತ್ಸವ

ಅ. 17ರಂದು ಜಿಲ್ಲಾಡಳಿತದಿಂದ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹೋರಾಟಗಾರರ ಸಲಹೆ, ಸೂಚನೆಗಳನ್ನು ಪಡೆದು ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಕೇವಲ ಔಪಚಾರಿಕವಾಗಿ ನಡೆಸದೆ, ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಮಹತ್ವ ಸಾರುವ ರೀತಿಯಲ್ಲಿ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶದಂತೆ ವಾಣಿಜ್ಯ ಮಳಿಗೆಗಳು ಸೇರಿದಂತೆ ವಿವಿಧ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಬಳಕೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯು 2023ರ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಹೋರಾಟ ನಡೆಸಿತ್ತು. ಈ ಹೋರಾಟದ ನಂತರ ರಾಜ್ಯ ಸರ್ಕಾರ ಕನ್ನಡ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ ಎಂದು ವಿನೋದ ರೆಡ್ಡಿ ತಿಳಿಸಿದ್ದಾರೆ.

ನಗರದ ಅಂಗಡಿ-ಮುಂಗಟ್ಟುಗಳು, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳು, ಚಿತ್ರಮಂದಿರಗಳು, ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ನಿಯಮ ಪಾಲನೆಯಾಗುವಂತೆ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರುಹಾಜರಾಗುವುದರ ಜೊತೆಗೆ ಕನ್ನಡ ನಾಮಫಲಕಗಳ ಅಳವಡಿಕೆ ವಿಚಾರದಲ್ಲಿಯೂ ನಿರ್ಲಕ್ಷ್ಯ ವಹಿಸಿದರೆ, ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದು ವಿನೋದ ರೆಡ್ಡಿ ಎಂ. ಎಚ್ಚರಿಕೆ ನೀಡಿದ್ದಾರೆ.

projectededore

Recent Posts

ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ಮಣ್ಣಿನ ಸ್ನಾನದ ಶಿಬಿರ

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…

2 hours ago

ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…

1 day ago

ಮಂತ್ರಾಲಯದಲ್ಲಿ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…

1 day ago

ಆಗುಂಬೆ ಬಳಿ ಭೀಕರ ಅಪಘಾತ: ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ ಸ್ಥಳದಲ್ಲೇ ದುರ್ಮರಣ

ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…

1 day ago

ವಿಶೇಷ ವರದಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಕನ್ನಡಕ್ಕೇ ಅಪಮಾನ! ಎಐ ಸೃಷ್ಟಿಸಿದ ಶುಭಾಶಯ ಪೋಸ್ಟರ್‌ಗಳಲ್ಲಿ ಅಕ್ಷರಗಳ ಅಪಭ್ರಂಶ; ಕನ್ನಡಾಭಿಮಾನವೋ, ಕೇವಲ ಪ್ರದರ್ಶನವೋ?

ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…

1 day ago

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ. ಅಜಯ್ ಸಿಂಗ್

ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…

1 day ago