ರಾಯಚೂರು:ವಿಜಯದಶಮಿ ದಸರಾ ಹಬ್ಬದ ಅಂಗವಾಗಿ ರಾಯಚೂರು ತಾಲೂಕಿನ ಸಿದ್ಧಾಂಪೂರಿನಲ್ಲಿ ಶ್ರೀ ಸನ್ನಿ ಮಹಾರಾಜ್ ಯೂತ್ ಫೋರ್ಸ್ ಸಂಯುಕ್ತಾಶ್ರಯದಲ್ಲಿ ಪುರುಷರಿಗಾಗಿ ರಾಷ್ಟ್ರಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿಯ ಸೀಸನ್-3 ಆಯೋಜಿಸಲಾಗಿದೆ. ಅಕ್ಟೋಬರ್ 20ರಂದು ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಕ್ರೀಡಾಭಿಮಾನಿಗಳು ಹಾಗೂ ಕಬಡ್ಡಿ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಹಾಗೂ ಯುವ ಮುಖಂಡ ಸನ್ನಿ ಮಹಾರಾಜ್ ಅವರ ಉಪಸ್ಥಿತಿಯಲ್ಲಿ ಕ್ರೀಡಾಕೂಟ ನಡೆಯಲಿದೆ. ಮ್ಯಾಟ್ ಮೇಲೆ ಪಂದ್ಯಾವಳಿ ಆಯೋಜಿಸಲಾಗಿದ್ದು, ಆಟಗಾರರಿಗೆ ಅನುಕೂಲವಾಗುವಂತೆ ಡಿಜಿಟಲ್ ಸ್ಕೋರ್‌ಬೋರ್ಡ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನವಾಗಿ ₹60,001, ದ್ವಿತೀಯ ಬಹುಮಾನವಾಗಿ ₹40,000, ತೃತೀಯ ಬಹುಮಾನವಾಗಿ ₹20,000 ಹಾಗೂ ಚತುರ್ಥ ಬಹುಮಾನವಾಗಿ ₹10,000 ನೀಡಲಾಗುತ್ತದೆ.
ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಎಲ್ಲಾ ಆಟಗಾರರಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. 200 ಕಿ.ಮೀ.ಗಿಂತ ಹೆಚ್ಚಿನ ದೂರದಿಂದ ಆಗಮಿಸುವ ತಂಡಗಳಿಗೆ ಗುರುತಿನ ಚೀಟಿ ಕಡ್ಡಾಯದೊಂದಿಗೆ ಸಂಸ್ಥೆಯ ವತಿಯಿಂದ ₹3,000 ಪ್ರಯಾಣ ಭತ್ಯೆ ನೀಡಲಾಗುತ್ತದೆ.
ತಂಡಗಳ ನೋಂದಣಿಗೆ ಅಕ್ಟೋಬರ್ 19 ಕೊನೆಯ ದಿನವಾಗಿದ್ದು, ನೋಂದಣಿ ಶುಲ್ಕ ₹500 ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ನರಸಿಂಹಲು (9611090362, 7899966788, 9380403812), ಅರುಣ್ (9148221248), ಮಹಾಂತೇಶ (6362659095), ತಿಮ್ಮಪ್ಪ (9632177390), ಚಂದ್ರು (8861375841) ಅಥವಾ ಉಲ್ಲೇಶ (9113896587) ಅವರನ್ನು ಸಂಪರ್ಕಿಸಬಹುದು.
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…
ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…
ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…
ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…
ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…
ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…