ರಾಯಚೂರು

ಮನೆ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮಕ್ಕೆ ಚಾಲನೆ: ತ್ಯಾಜ್ಯ ಪ್ಲಾಸ್ಟಿಕ್ ಬಾಟಲಿಯಿಂದ ತಯಾರಿಸಿದ ಆನೆ ಲೋಕಾರ್ಪಣೆ

ರಾಯಚೂರು: ನಗರದಿಂದ ಸಂಗ್ರಹಿಸಲಾದ ತ್ಯಾಜ್ಯದಲ್ಲಿನ ಖಾಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ಧಾರವಾಡ ಮೂಲದ ಆರ್ಟ್ ವ್ಯಾಲಿ ಸಂಸ್ಥೆ ತಯಾರಿಸಿದ ಆನೆ ಕಲಾಕೃತಿಯನ್ನು ಸೋಮವಾರ ಉದ್ಘಾಟಿಸಲಾಯಿತು.
ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಲೋಗೊ ಹೊಂದಿರುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಆನೆ ಕಲಾಕೃತಿಯನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ‘ನಿಮ್ಮ ಬಾಗಿಲಿಗೆ ಮಹಾನಗರ ಪಾಲಿಕೆ’ ಕಂದಾಯ ಅದಾಲತ್ ಹಂತ-2 ಕಾರ್ಯಕ್ರಮಕ್ಕೆ ಡಿಜಿಟಲ್ ಲಾಗಿನ್ ಮೂಲಕ ಚಾಲನೆ ನೀಡಿದರು. ಕಂದಾಯ ಅದಾಲತ್‌ನಲ್ಲಿ ವಿಚಾರಣೆ ನಡೆಸಲಾದ 10 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಇ-ಖಾತಾ ವಿತರಿಸಲಾಯಿತು.
ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸಾಂಕೇತಿಕವಾಗಿ ಕಿಟ್‌ಗಳನ್ನು ಹಾಗೂ ಡ್ರೈವರ್‌ಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ನಂತರ ಸಚಿವರು ರಾಯಚೂರು ಮಹಾನಗರ ಪಾಲಿಕೆ ಹಾಗೂ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಗರಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳು ಹಾಗೂ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಬಸನಗೌಡ ದದ್ದಲ್, ಎನ್.ಎಸ್. ಬೋಸರಾಜು, ವಸಂತಕುಮಾರ, ರಾಜಶೇಖರ ರಾಮಸ್ವಾಮಿ, ಪೂವಿತಾ ಎಸ್., ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹಾಪಾತ್ರ, ಪ್ರಮುಖರಾದ ಜಯಣ್ಣ, ಕೆ. ಶಾಂತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

projectededore

Recent Posts

‘ಪ್ರೇರಣಾ’ – ವಿ. ಎಸ್. ಕಾಂತನವರ ಹಿಂದಿ ಕಾವ್ಯ ಸುಮಗುಚ್ಛ

ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…

3 weeks ago

ಶಾಸಕ ಬಸನಗೌಡ ದದ್ದಲ್‌ರಿಂದ ವಿಶ್ವವಿದ್ಯಾಲಯದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…

3 weeks ago

ಮಟಮಾರಿಯಲ್ಲಿ ₹3 ಕೋಟಿ ರಸ್ತೆ ಕಾಮಗಾರಿಗೆ ಭೂಮಿಪೂಜೆ; ಕುರ್ಡಿಯಲ್ಲಿ ₹25 ಲಕ್ಷದ ಸಮುದಾಯ ಭವನ ಉದ್ಘಾಟನೆ

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…

3 weeks ago

ಸತೀಶ್ ಜಾರಕಿಹೊಳಿ ಮೇಲಿನ ED ದಾಳಿ ಖಂಡಿಸಿ ಸಿರವಾರದಲ್ಲಿ ಪಂಜಿನ ಮೆರವಣಿಗೆ

ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…

3 weeks ago

ರಾಯಚೂರಿನಲ್ಲಿ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…

3 weeks ago

ವಾರ್ಡ್ ನಂ.22ರ ಮನೆ-ಮನೆಗೆ ಭೇಟಿ: ನಿವಾಸಿಗಳ ಸಮಸ್ಯೆ ಆಲಿಸಿದ ರಾಮನಗೌಡ ಏಗನೂರು

ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…

3 weeks ago