ರಾಯಚೂರು: ರಸ್ತೆ ಸಂಪರ್ಕ, ಶಿಕ್ಷಣ, ಕುಡಿಯುವ ನೀರು, ಧಾರ್ಮಿಕ ಕೇಂದ್ರಗಳು ಹಾಗೂ ಸಮುದಾಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದರು.

ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಹಲವು ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ, ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು. ಗ್ರಾಮೀಣ ಭಾಗದ ಪ್ರತಿಯೊಂದು ಗ್ರಾಮಕ್ಕೂ ಅಭಿವೃದ್ಧಿ ಹಾಗೂ ಪ್ರತಿಯೊಬ್ಬರಿಗೂ ಅಗತ್ಯ ಸೌಲಭ್ಯ ಒದಗಿಸುವ ಸಂಕಲ್ಪದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುತ್ತಿದೆ ಎಂದು ಹೇಳಿದರು.

ಗಣಮೂರು: ಗಣಮೂರಿನಿಂದ ಕಟಕನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಅಂದಾಜು ₹150 ಲಕ್ಷ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.

ನಾಗನದೊಡ್ಡಿ: ಮಾರೇಮ್ಮ ದೇವಿ ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಅಂದಾಜು ₹37.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಯಿತು.

ಕೊತ್ತದೊಡ್ಡಿ: ಮಾರೇಮ್ಮ ದೇವಿ ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಚಂದ್ರಬಂಡಾ: ಬಂಡೆ ರಂಗನಾಥ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.

ವಡ್ಲಂದೊಡ್ಡಿ: ಅಂದಾಜು ₹45 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮೂರು ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಯಿತು.

ಮಂಡಲಗೇರ: ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಶಾಸಕರು, ತರಗತಿ ಕೊಠಡಿಗಳ ಸ್ಥಿತಿಗತಿ ಹಾಗೂ ಶಾಲೆಯಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಸಿಂಗನೋಡಿ: ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಿ, ಹೆಚ್ಚುವರಿ ಎರಡು ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಈ ಕಾಮಗಾರಿಗಳಿಗೆ ಒಟ್ಟು ಅಂದಾಜು ₹60 ಲಕ್ಷ ವೆಚ್ಚವಾಗಲಿದೆ. ಅಂದಾಜು ₹25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಧನಮ್ಮ ಗುಡಿ ಹಾಗೂ ಕರೇಮ್ಮ ಗುಡಿಗಳನ್ನು ಉದ್ಘಾಟಿಸಿದರು.

ಬಾಪುರ: ಬಾಪುರದಿಂದ ಬಾಪುರ ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಅಂದಾಜು ₹120 ಲಕ್ಷ ಹಾಗೂ ಬಾಪುರದಿಂದ ಆಂಧ್ರಪ್ರದೇಶ ಗಡಿವರೆಗಿನ ರಸ್ತೆ ಕಾಮಗಾರಿಗೆ ಅಂದಾಜು ₹65 ಲಕ್ಷ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಸರ್ಕಾರಿ ಪ್ರೌಢಶಾಲೆಯಲ್ಲಿ ಅಂದಾಜು ₹46.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಿ, ಹೆಚ್ಚುವರಿ ಒಂದು ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಅಂದಾಜು ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಗ್ರಂಥಾಲಯವನ್ನು ಉದ್ಘಾಟಿಸಲಾಯಿತು. ಕರೇಮ್ಮ ಗುಡಿ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು.

ಕಟ್ಲಟ್ಕೂರು: ಅಂದಾಜು ₹36.13 ಲಕ್ಷ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಗ್ರಾಮೀಣ ಭಾಗದ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ರಸ್ತೆ, ಶಿಕ್ಷಣ, ಕುಡಿಯುವ ನೀರು, ಧಾರ್ಮಿಕ ಕೇಂದ್ರಗಳು ಹಾಗೂ ಸಮುದಾಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಂತ ಹಂತವಾಗಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದರು.

Previous articleಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳ ಮೂಲಭೂತ ತತ್ವ, ಅನ್ವಯಗಳ ಕುರಿತು ವಿಶೇಷ ಉಪನ್ಯಾಸ
Next articleವಾಲ್ಮೀಕಿ ವಿವಿ : ಇಂಗ್ಲಿಷ್ ವಿಭಾಗ ಮತ್ತು ಇಂಗ್ಲಿಷ್ ಲಿಟರರಿ ಕ್ಲಬ್ ವತಿಯಿಂದ ಒಂದು ದಿನದ ವಿಚಾರ ಸಂಕೀರಣ