ರಾಯಚೂರು

ಪರಿಸರ ಸ್ವಚ್ಛತೆಯಿಂದ ಆರೋಗ್ಯ ಅಭಿವೃದ್ಧಿ: ಡಾ. ಸತೀಶ್

ರಾಯಚೂರು: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ್ ಹೇಳಿದರು. ಸ್ವಚ್ಛತಾ ಹಿ ಸೇವಾ ಅಭಿಯಾನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ರಾಯಚೂರು ವತಿಯಿಂದ ಹಮ್ಮಿಕೊಂಡಿರುವ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯ ನಡೆಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶದ ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕಸಮುಕ್ತ ಪರಿಸರ ನಿರ್ಮಾಣ, ತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರು ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ಸಾರ್ವಜನಿಕರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಎಲ್ಲೆಂದರಲ್ಲಿ ಕಸವನ್ನು ಎಸೆಯದೆ, ನಿಗದಿಪಡಿಸಿದ ಸ್ಥಳಗಳಲ್ಲಿ ಕಸವನ್ನು ಹಾಕಬೇಕು. ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರಲ್ಲಿ ನೈರ್ಮಲ್ಯದ ಕುರಿತು ಅರಿವು ಮೂಡಿಸುವುದು, ಅವರ ವರ್ತನೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದು, ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸುವುದು ಹಾಗೂ ಸಾರ್ವಜನಿಕ ಸ್ಥಳಗಳು, ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುವುದು ಅಗತ್ಯವಾಗಿದೆ. ಸ್ವಚ್ಛ ಪರಿಸರ ನಿರ್ಮಾಣವಾದಾಗ ಮಾತ್ರ ಆರೋಗ್ಯಕರ ಸಮಾಜ ಹಾಗೂ ಅಭಿವೃದ್ಧಿ ಹೊಂದಿದ ದೇಶ ನಿರ್ಮಾಣ ಸಾಧ್ಯ ಎಂದು ಡಾ. ಸತೀಶ್ ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ ಕೆ., ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುರೇಶ್, ಸಂಧ್ಯಾ, ಎಂ.ಟಿ.ಎಸ್., ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಸಂತಕುಮಾರಿ, ಆಶಾ ಮೆಂಟರ್ ಮರಿಯಾಳಮ್ಮ, ಪ್ರಥಮ ದರ್ಜೆ ಸಹಾಯಕ ಭದ್ರಿನಾಥ, ಹೇಮಾರೆಡ್ಡೆಪ್ಪ, ಲೆಕ್ಕ ಪರಿಶೋಧಕ ತಿಮ್ಮರಾಜು, ಡಿ.ಇ.ಒ. ಮಂಜುಳಾ, ಮಲ್ಲಿಕಾರ್ಜುನ, ಚೇತನ್, ವೆಂಕಟೇಶ್, ಜಮುನಾ, ಸುಜಾತ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿ ಸ್ವಚ್ಛತಾ ಕಾರ್ಯ ನಡೆಸಿದರು.

projectededore

Recent Posts

ಗಾಣೇಕಲ್ ಜಲಾಶಯದಿಂದ ನೀರು ಬಿಡುಗಡೆ: ಕುಡಿಯುವ ನೀರು, ಬೆಳೆಗಳಿಗೆ ನೀರಾವರಿಗೆ ಆದ್ಯತೆ

ಗಾಣೇಕಲ್ ಜಲಾಶಯದಿಂದ ಕುಡಿಯುವ ನೀರು ಪೂರೈಕೆ ಹಾಗೂ ರೈತರ ಬೆಳೆಗಳ ನೀರಾವರಿಗಾಗಿ ನೀರು ಬಿಡುಗಡೆ ಮಾಡಲಾಗಿದ್ದು, ಸಮರ್ಪಕ ನಿರ್ವಹಣೆಗೆ ಶಾಸಕ…

2 days ago

ರಕ್ತದಾನದ ಮೂಲಕ ಬೆಳ್ಳಿ ಮಹೋತ್ಸವಕ್ಕೆ ಅರ್ಥಪೂರ್ಣ ಆಚರಣೆ: ಎ. ವಸಂತಕುಮಾರ: ರಾಯಚೂರು ರಕ್ತದಾನ ಶಿಬಿರ

ರಾಯಚೂರು ರಕ್ತದಾನ ಶಿಬಿರ:ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ರೋಟರಿ ಜನಸೇವಾ ಪ್ರತಿಷ್ಠಾನದ ರಕ್ತ ಕೇಂದ್ರದ ಸಹಯೋಗದಲ್ಲಿ ರಕ್ತದಾನ…

3 days ago

ಬರ ಪರಿಸ್ಥಿತಿ: ರೈತರು, ಬಡವರು ಹಾಗೂ ಕೂಲಿ ಕಾರ್ಮಿಕರ ರಕ್ಷಣೆಗೆ ಸರ್ಕಾರ ಬದ್ಧ: ಡಾ. ಜಿ. ಪರಮೇಶ್ವರ

ಸಿಂಧನೂರು, ಅ.8: ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಬಡವರು ಹಾಗೂ ಕೂಲಿ ಕಾರ್ಮಿಕರ ಹಿತ ಕಾಪಾಡಲು ರಾಜ್ಯ ಸರ್ಕಾರ…

4 days ago

ಮಾದಕ ವ್ಯಸನ ನಿರ್ಮೂಲನೆ ಇಂದಿನ ಅಗತ್ಯ: ಸಿ.ವಿ. ಚಂದ್ರಶೇಖರ್

ಕೊಪ್ಪಳದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾದಕ ವ್ಯಸನ ನಿರ್ಮೂಲನೆ, ಯುವಜನರಲ್ಲಿ ಜಾಗೃತಿ ಮತ್ತು ಅಕ್ರಮ…

1 week ago

ರಾಯಚೂರು ನ್ಯಾಯಾಲಯದಲ್ಲಿ ಗಾಂಧೀಜಿ ಜಯಂತಿ ಆಚರಣೆ

ರಾಯಚೂರು: ರಾಯಚೂರು ನ್ಯಾಯವಾದಿಗಳ ಸಂಘ ಹಾಗೂ ನ್ಯಾಯಾಂಗ ಇಲಾಖೆಯ ವತಿಯಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು.…

1 week ago

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಆಯುಕ್ತೆ ಫೌಜಿಯಾ ತರನ್ನುಮ್

ರಾಯಚೂರು: ಜಿಲ್ಲೆಯ ಲಿಂಗಸುಗೂರು ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿ ಕೈಗೊಂಡಿರುವ…

1 week ago