ರಾಯಚೂರು: ನಗರದ ರೇಸ್ ಚಾಣಕ್ಯ ಜೆನ್ ನೆಕ್ಸ್ ಶಾಲೆಯ ಟೇಬಲ್ ಟೆನ್ನಿಸ್ ಆಟಗಾರ ಕಾಕುಮನಿ ನೀಲಕಂಠ ವಿವೇಕಾನಂದ ಅವರು ಬಳ್ಳಾರಿಯಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್‌ನಲ್ಲಿ ತೃತೀಯ ಬಹುಮಾನ ಪಡೆದು ರಾಯಚೂರು ನಗರಕ್ಕೆ ಕೀರ್ತಿ ತಂದಿದ್ದಾರೆ.
ಸೆಪ್ಟೆಂಬರ್ 6ರಂದು ಬಳ್ಳಾರಿಯಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್‌ನ್ನು ಬಳ್ಳಾರಿ ಸ್ಟೇಡಿಯಂ ಆಟಗಾರರು ಆಯೋಜಿಸಿದ್ದರು. ಟೂರ್ನಮೆಂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾಕುಮನಿ ನೀಲಕಂಠ ವಿವೇಕಾನಂದ ಅವರು ತೃತೀಯ ಬಹುಮಾನ ಪಡೆದುಕೊಂಡರು.
ರಾಯಚೂರು ನಗರಕ್ಕೆ ಕೀರ್ತಿ ತಂದಿರುವ ಆಟಗಾರನ ಸಾಧನೆಗೆ ರಾಯಚೂರು ಜಿಲ್ಲಾ ಟೇಬಲ್ ಟೆನ್ನಿಸ್ ಸಂಸ್ಥೆಯ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಉಪಾಧ್ಯಕ್ಷ ನಂದಾಪುರ ಶ್ರೀನಿವಾಸ, ಕಾರ್ಯದರ್ಶಿ ಯು. ಲಕ್ಷ್ಮೀ ನಾರಾಯಣ ಕೇಕುಡ ಹಾಗೂ ಟೇಬಲ್ ಟೆನ್ನಿಸ್ ತರಬೇತಿದಾರ ಮಂಚಾಲ ವೀರಣ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…