ರಾಯಚೂರು: ಯುವಜನರು ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹೇಳಿದರು.
ನಗರದ ಆಶಾಪುರ ರಸ್ತೆಯಲ್ಲಿರುವ ವಾಲ್ಮೀಕಿ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿಯವರು ತಪಸ್ಸಿನ ಮೂಲಕ ಜ್ಞಾನ ಸಂಪಾದಿಸಿ, ರಾಮನಾಮದ ಮಹಿಮೆಯಿಂದ ಪ್ರೇರಿತರಾಗಿ 24 ಸಾವಿರ ಶ್ಲೋಕಗಳು ಹಾಗೂ ಏಳು ಕಾಂಡಗಳನ್ನು ಒಳಗೊಂಡ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಇಂತಹ ಮಹಾನ್ ವ್ಯಕ್ತಿಯ ಜಯಂತಿ ಆಚರಿಸುವುದು ನಮ್ಮೆಲ್ಲರ ಭಾಗ್ಯವಾಗಿದೆ ಎಂದರು.
ಜಿಲ್ಲೆಯಲ್ಲಿ ಯುವಜನರಲ್ಲಿ ಮದ್ಯಪಾನ ಹಾಗೂ ಮಾದಕವಸ್ತುಗಳ ಸೇವನೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇವುಗಳಿಂದ ದೈಹಿಕ ಹಲ್ಲೆ, ಗುಂಪು ಘರ್ಷಣೆ ಸೇರಿದಂತೆ ಹಲವು ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಯುವಕರು ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ರಾಯಚೂರಿನಲ್ಲಿ ಉದ್ರಿ ವಿಚಾರಕ್ಕೆ ಕಿರಾಣಿ ಅಂಗಡಿ ಮಾಲೀಕನ ಕೊಲೆ..? (ರಾಯಚೂರು ಕೊಲೆ ಪ್ರಕರಣ)
ರಾಯಚೂರು ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸುವವರ ಸಂಖ್ಯೆ ಕಡಿಮೆಯಿದ್ದು, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿ ಪ್ರಾಣ ಕಳೆದುಕೊಳ್ಳುವ ಘಟನೆಗಳು ನಡೆಯುತ್ತಿವೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಉತ್ತಮ ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕ ಹಾಗೂ ಸರ್ಕಾರಿ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಯುವಜನರು ಕೊಡುಗೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಡಾ. ಬಸವರಾಜ, ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರಿಡಲಾಗಿದ್ದು, ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವ ಅಗತ್ಯವಿದೆ. ಇದರಿಂದ ವಾಲ್ಮೀಕಿ ಹಾಗೂ ಅವರ ಸಮುದಾಯದ ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ಹಿನ್ನೆಲೆಯ ಅಧ್ಯಯನಕ್ಕೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದರು.
ಮಹರ್ಷಿ ವಾಲ್ಮೀಕಿಯವರು ಮಾನವೀಯತೆ, ಮಾನವೀಯ ಮೌಲ್ಯಗಳು ಹಾಗೂ ಕರುಣೆಯನ್ನು ಪ್ರತಿಪಾದಿಸಿದ್ದಾರೆ. ವಾಲ್ಮೀಕಿ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಪ್ರೋತ್ಸಾಹಧನ, ಸರಳ ವಿವಾಹಕ್ಕೆ ಸಹಾಯಧನ ಹಾಗೂ ಉದ್ಯಮ ಆರಂಭಿಸಲು ಸಾಲ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹರಿಗೆ ಭೂಮಿ ಪಡೆಯಲು ಅವಕಾಶಗಳಿದ್ದು, ಸಮುದಾಯದವರು ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಮುರಳೀಧರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುನೀತಾ, ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವೈ. ವಾಲ್ಮೀಕಿ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ, ಸಮಾಜದ ಮುಖಂಡ ರಘುವೀರ್ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮುದಾಯದವರು ಉಪಸ್ಥಿತರಿದ್ದರು.
ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…
ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…
ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…
ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…
ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…
ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…
View Comments