ಅಪರಾಧ

ಹೊಲದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ರಾಯಚೂರು: ಯಾಪಲದಿನ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗನೋಡಿ ಸೀಮಾಂತರದ ಹೊಲವೊಂದರಲ್ಲಿ 41 ವರ್ಷದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ.

ತೆಲಂಗಾಣ ರಾಜ್ಯದ ಗದ್ವಾಲ್ ಜಿಲ್ಲೆಯ ಕೆ.ಟಿ. ದೊಡ್ಡಿ ಮಂಡಲದ ನಂದಿನ್ನಿ ಗ್ರಾಮದ ಬಾಪುರ ಮಾರೆಮ್ಮ (41) ಮೃತಪಟ್ಟ ಮಹಿಳೆ. ಇವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗಿರಲಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆಗಾಗ ಮನೆಯಿಂದ ಹೊರಹೋಗಿ ಒಂದು ವಾರದ ಬಳಿಕ ಮರಳಿ ಬರುತ್ತಿದ್ದರು ಎನ್ನಲಾಗಿದೆ.

ಅ.27ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯಿಂದ ಹೊರಹೋಗಿದ್ದ ಮಾರೆಮ್ಮ, ಅ.28ರಂದು ಬೆಳಗ್ಗೆ 7 ಗಂಟೆಯ ಅವಧಿಯಲ್ಲಿ ಸಿಂಗನೋಡಿ ಸೀಮಾಂತರದ ಭೀರಪ್ಪ ತಿಕ್ಕಯ್ಯ ಎಂಬುವವರ ಹೊಲದಲ್ಲಿ ಕಾನಗಿ ಗಿಡಕ್ಕೆ ಸ್ಪ್ರಿಂಕ್ಲರ್ ಪೈಪ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ತಾಯಿ ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರಬಹುದು ಎಂದು ಪುತ್ರ ಬಿ.ವೀರಣ್ಣ ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯ ಸಾವಿನಲ್ಲಿ ಯಾರ ಮೇಲೂ ಸಂಶಯವಿಲ್ಲವೆಂದೂ ಅವರು ಹೇಳಿದ್ದಾರೆ.

ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

projectededore

Recent Posts

ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ಮಣ್ಣಿನ ಸ್ನಾನದ ಶಿಬಿರ

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ಮಾನ್ವಿ ವತಿಯಿಂದ ನಡೆದ ಮಣ್ಣಿನ…

2 hours ago

ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಾಯಚೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಪ್ರತಿಯೊಬ್ಬರ ಮಾತೃಭಾಷೆಯಾಗಬೇಕು ಎಂದು ಕುಲಸಚಿವ ಡಾ. ಟಿ.…

1 day ago

ಮಂತ್ರಾಲಯದಲ್ಲಿ ಮಕ್ಕಳಿಗಾಗಿ ಉಚಿತ ಸುವರ್ಣಪ್ರಾಶನ ಕಾರ್ಯಕ್ರಮ

ಮಂತ್ರಾಲಯ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಜಯೇಂದ್ರ ಆರೋಗ್ಯ ಶಾಲೆಯಲ್ಲಿ ನ.1ರಂದು 16…

1 day ago

ಆಗುಂಬೆ ಬಳಿ ಭೀಕರ ಅಪಘಾತ: ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ ಸ್ಥಳದಲ್ಲೇ ದುರ್ಮರಣ

ಆಗುಂಬೆ ಬಳಿ ಎಕ್ಸ್‌ಯುವಿ ವಾಹನ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಸಿಂಧನೂರಿನ ಯುವ ವೈದ್ಯ ಡಾ. ಚೇತನಕುಮಾರ (28) ಸ್ಥಳದಲ್ಲೇ ಮೃತಪಟ್ಟಿದ್ದು,…

1 day ago

ವಿಶೇಷ ವರದಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಕನ್ನಡಕ್ಕೇ ಅಪಮಾನ! ಎಐ ಸೃಷ್ಟಿಸಿದ ಶುಭಾಶಯ ಪೋಸ್ಟರ್‌ಗಳಲ್ಲಿ ಅಕ್ಷರಗಳ ಅಪಭ್ರಂಶ; ಕನ್ನಡಾಭಿಮಾನವೋ, ಕೇವಲ ಪ್ರದರ್ಶನವೋ?

ಕನ್ನಡ ರಾಜ್ಯೋತ್ಸವದ ಶುಭಾಶಯ ಪೋಸ್ಟರ್‌ಗಳಲ್ಲಿ ಎಐ ಸೃಷ್ಟಿಸಿದ ಕನ್ನಡ ಅಕ್ಷರದೋಷಗಳು ಚರ್ಚೆಗೆ ಗ್ರಾಸವಾಗಿವೆ. ಅಧಿಕಾರಿಗಳು, ಗಣ್ಯರು, ಕನ್ನಡಪರ ಸಂಘಟನೆಗಳೂ ಎಐ…

1 day ago

ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ. ಅಜಯ್ ಸಿಂಗ್

ರಾಯಚೂರು: ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ…

1 day ago