ರಾಯಚೂರು: ಪತ್ರಕರ್ತರ ಹಿತಾಸಕ್ತಿ ಹಾಗೂ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ‘ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ರಿ)’ ಸಂಸ್ಥೆ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. ಇದರ ಅಂಗವಾಗಿ ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಯುವಜನತೆ, ಮಾಧ್ಯಮ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಿಂದ ಎದುರಾಗುತ್ತಿರುವ ಸವಾಲುಗಳ ಕುರಿತು ವಿದ್ಯಾರ್ಥಿಗಳಲ್ಲಿ ಚಿಂತನೆ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ 11ರಂದು ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದ್ದು, ‘ಮಾಧ್ಯಮಗಳು ಮತ್ತು ಪ್ರಜಾಪ್ರಭುತ್ವ: ಇಂದಿನ ಸವಾಲುಗಳು ಹಾಗೂ ನೈತಿಕತೆ’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು.
ಸೆಪ್ಟೆಂಬರ್ 12ರಂದು ಭಾಷಣ ಸ್ಪರ್ಧೆ ನಡೆಯಲಿದ್ದು, ‘ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳು ಮಾತನಾಡಬೇಕು.
ಪ್ರತಿ ಕಾಲೇಜಿನಿಂದ ಪ್ರತಿ ಸ್ಪರ್ಧೆಗೆ ಗರಿಷ್ಠ ನಾಲ್ವರು ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹5,000, ದ್ವಿತೀಯ ಸ್ಥಾನ ಪಡೆದವರಿಗೆ ₹3,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹2,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಪದವಿ ಮಹಾವಿದ್ಯಾಲಯಗಳ ಆಡಳಿತ ಮಂಡಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸ್ಪರ್ಧೆಗಳಿಗೆ ಕಳುಹಿಸಿಕೊಡಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಗಿಲ್ಡ್‌ನ ಅಧ್ಯಕ್ಷ ವಿಜಯ್ ಜಾಗಟಗಲ್ ಹಾಗೂ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9148245011 ಸಂಖ್ಯೆಗೆ ಸಂಪರ್ಕಿಸಬಹುದು.
ಲೇಖಕರು - ಶ್ರೀಮತಿ ಡಿ. ಕೋಮಲ, ರಾಯಚೂರು ಗುರುಶ್ರೀ ವಿ. ಎಸ್. ಕಾಂತನವರ ಅವರು ಕನ್ನಡ ಮತ್ತು ಹಿಂದಿ ಎರಡೂ…
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಪ್ರಮುಖ ಅಭಿವೃದ್ಧಿ…
ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಮಟಮಾರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮ್ಯಾಕ್ರೋ ಯೋಜನೆಯಡಿ ₹3…
ಸಿರವಾರ: ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ED ದಾಳಿ ನಡೆಸಿದೆ ಎಂದು ಆರೋಪಿಸಿ,…
ರಾಯಚೂರು: ನಗರದ ಪೋತಗಲ್ ರಸ್ತೆಯ ಮನೆಯೊಂದರಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ…
ರಾಯಚೂರು: ನಗರದ ವಾರ್ಡ್ ನಂ.22ರಲ್ಲಿ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಅವರು ಭಾನುವಾರ ಮನೆ-ಮನೆಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು…