ಸ್ವಚ್ಛತೆ ಕಾಪಾಡಲು ಸಾರ್ವಜನಿಕರಿಗೆ ರವಿ ಬೋಸರಾಜು ಕರೆ

ರಾಯಚೂರು: ಸ್ವಚ್ಛ ಹಾಗೂ ಸುಂದರ ನಗರ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಸವನ್ನು ಎಲ್ಲೆಂದರಲ್ಲಿ ಹಾಕದೆ, ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಮೂಲಕ ನಗರ ಸ್ವಚ್ಛತೆಗೆ ಕೈಜೋಡಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಮನವಿ ಮಾಡಿದರು.

ನಗರದ ವಾರ್ಡ್‌ ನಂ. 7 ಮತ್ತು 8ರ ಟಿಪ್ಪು ಸುಲ್ತಾನ್ ರಸ್ತೆ ಬಡಾವಣೆಗೆ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು ಅವರು ಭೇಟಿ ನೀಡಿ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

ನಗರದ ವಿವಿಧ ಬಡಾವಣೆಯ ಪ್ರದೇಶಗಳಿಗೆ ತೆರಳಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಿದ ಅವರು, ಸ್ವಚ್ಛತೆ, ರಸ್ತೆ, ಒಳಚರಂಡಿ ಹಾಗೂ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರ ಗಮನಕ್ಕೆ ತಂದರು.

ಬಡಾವಣೆಯ ರಸ್ತೆ, ಒಳಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ರವಿ ಬೋಸರಾಜು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನರಸಿಂಹಲು ಮಾಡಗಿರಿ, ವಾಹೀದ್, ಅಲಿ, ಅತೀಖ್ ರಾಮನಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Previous articleರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಸೆ.11, 12ರಂದು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ
Next articleಹೀರಾ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಭಕ್ತಿಪೂರ್ವಕ ಆಚರಣೆ