ಸಿರವಾರ: ಸಂಘಗಳ ಬಲವರ್ಧನೆ ಹಾಗೂ ಸದಸ್ಯರ ಆರ್ಥಿಕ ಸ್ವಾವಲಂಬನೆಗೆ ಒಕ್ಕೂಟ ಪದಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲಾ ನಿರ್ದೇಶಕ ರಾಘವೇಂದ್ರ ಹೇಳಿದರು.
ತಾಲೂಕಿನ ಕವಿತಾಳದಲ್ಲಿ ಸಿರವಾರ ತಾಲೂಕಿನ ಕವಿತಾಳ, ಪಾಮನಕಲ್ಲೂರು ಹಾಗೂ ಅನ್ವರಿ ವಲಯಗಳ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮವನ್ನು ಕವಿತಾಳ ಕಲ್ಮಠದ ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸಿ, ಶ್ರೀ ಕ್ಷೇತ್ರದ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಸದುಪಯೋಗ ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ರಾಘವೇಂದ್ರ ಅವರು, ಪದಾಧಿಕಾರಿಗಳು ಜವಾಬ್ದಾರಿ ಅರಿತು ಸಂಘಗಳ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಸಮಸ್ಯೆಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಪ್ರಗತಿಗೆ ಕೈಜೋಡಿಸಬೇಕು ಎಂದರು.
ತರಬೇತಿಯಲ್ಲಿ ಸಾಲದ ಬಡ್ಡಿ ಲೆಕ್ಕಾಚಾರ, ಮರುಪಾವತಿ ವಿಧಾನ, ಹಣಕಾಸು ವ್ಯವಹಾರದಲ್ಲಿ ಪಾರದರ್ಶಕತೆ ಹಾಗೂ ದಾಖಲೆ ನಿರ್ವಹಣೆ ಕುರಿತು ಪ್ರಾಯೋಗಿಕ ಮಾಹಿತಿ ನೀಡಲಾಯಿತು.
ತಾಲೂಕು ಯೋಜನಾಧಿಕಾರಿ ಸಂದೀಪ ನಾಯ್ಕ ಅವರು ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೂರು ವಲಯಗಳ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, VLEಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ…
ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…
ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…
ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…