ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಗೆಲುವು ನಿಶ್ಚಿತ ಎಂದು ಶಾಸಕ ಬಸನಗೌಡ ದದ್ದಲ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಉಪಸ್ಥಿತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಸಚಿವರು, ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು.
ಸಭೆಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಸಿದ್ಧತೆ, ಪಕ್ಷದ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸುಪ್ರೀಂ ಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಿರುವ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಶರಣಪ್ಪ ಮಟ್ಟೂರು ಅವರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಶಿಕ್ಷಕರ ಹಿತಾಸಕ್ತಿಗಳ ರಕ್ಷಣೆ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವುದು ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಶರಣಪ್ಪ ಮಟ್ಟೂರು ಅವರ ಗೆಲುವಿಗೆ ಶ್ರಮಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

Previous articleರಾಯಚೂರಿನಲ್ಲಿ ನಶಮುಕ್ತ ಯುವ ಕಾರ್ಯಕ್ರಮ: ವ್ಯಸನಮುಕ್ತರಾಗಿ ದೇಶದ ಭದ್ರತೆಗೆ ಪಾಲುದಾರರಾಗಿ – ಡಾ. ಪವನ್
Next articleಶ್ರೀ ಕಂದಗಡ್ಡೆ ಮಾರೆಮ್ಮದೇವಿ ಜಾತ್ರಾ ಮಹೋತ್ಸವ ಅ.20, 21ರಂದು