ರಾಯಚೂರು

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಸಿರವಾರ ಮಂಡಲದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.
​ಶುಕ್ರವಾರ ಪಾದಯಾತ್ರೆಯು ಯಶಸ್ವಿಯಾಗಿ 4ನೇ ದಿನಕ್ಕೆ ಕಾಲಿಟ್ಟಿದ್ದು, ಸಿಂಧನೂರಿನಿಂದ ಪ್ರಾರಂಭಗೊಂಡು ಕಾರಟಗಿ ಪಟ್ಟಣದತ್ತ ಸಾಗಿತು.

ದಾರಿಯುದ್ದಕ್ಕೂ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹರಿಹಾಯ್ದ ನಾಯಕರು ಮತ್ತು ಕಾರ್ಯಕರ್ತರು ಉಗ್ರ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

​ಈ ಪಾದಯಾತ್ರೆಯಲ್ಲಿ ಮಾಜಿ ಸಂಸದ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ. ವಿ. ನಾಯಕ್ ಮತ್ತು ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಅವರೊಂದಿಗೆ ಸಿರವಾರ ಮಂಡಲದ ಪ್ರಮುಖ ನಾಯಕರು ಹೆಜ್ಜೆ ಹಾಕಿದರು.
​ವಿಶೇಷವಾಗಿ ಸಿರವಾರ ಮಂಡಲ ಬಿಜೆಪಿ ಅಧ್ಯಕ್ಷ ಆರ್. ಕೆ. ಅಮರೇಶಪ್ಪ ಸಾಹುಕಾರ, ಪ್ರಧಾನ ಕಾರ್ಯದರ್ಶಿ ಎಂ. ಉದಯಕುಮಾರ ಚಾಗಭಾವಿ, ನಾಯಕ ನಾಗೇಶ ನಾಯಕ ಸೇರಿದಂತೆ ಮಂಡಲದ ಹಲವಾರು ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಜಾತಕ್ಕೆ ಆನೆಬಲ ನೀಡಿದರು.

projectededore

Recent Posts

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…

5 hours ago

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

5 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

5 hours ago

ಶ್ರೀರಾಮುಲು ಹೇಳಿಕೆ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ: ‘ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಮಾತನಾಡಿದರೆ ಸುಮ್ಮನಿರಲ್ಲ’

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…

9 hours ago

ಮಂತ್ರಾಲಯದ ರಾಯರ ದರ್ಶನ ಪಡೆದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ

ಸಿರವಾರ : ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ನಿಮಿತ್ತ ಜೆಡಿಎಸ್ ನ ಜನಪ್ರಿಯ ನಾಯಕರು ಹಾಗೂ…

10 hours ago

ವಾಲಿಬಾಲ್, ಥ್ರೋಬಾಲ್ ನಲ್ಲಿ ಕಿತ್ತೂರ ಚೆನ್ನಮ್ಮ ಸೈನ್ಸ್ ಕಾಲೇಜಿಗೆ ಪ್ರಥಮ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿರವಾರ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನವಲಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ಪಿಯು ಸೈನ್ಸ್ ಕಾಲೇಜ್…

10 hours ago